ಕೆನಡಾ : ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಹಠಾತ್ ರಾಜೀನಾಮೆಯಿಂದ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಕುತೂಹಲ ಸಾಕಷ್ಟು ಮೂಡಿದೆ. ಭಾರತ ಮೂಲದ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಬಳಿಕ ಅವರು ಕನ್ನಡದಲ್ಲಿಯೇ ಮಾತನಾಡಿದ್ದು ಸುದ್ದಿಯಾಗಿದೆ.
ಜಸ್ಟಿನ್ ಟ್ರುಡೋ ಅವರ ರಾಜೀನಾಮೆಯಿಂದ ತೆರವಾಗಿರುವ ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗ ಚಂದ್ರ ಆರ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮ ಪತ್ರ ಸಲ್ಲಿಕೆ ಮಾಡಿದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದಾರೆ. ಚಂದ್ರ ಆರ್ಯ ತುಮಕೂರಿನ ಸಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿದ್ದು. ಕೆನಾಡದ ಪ್ರಧಾನಿಯ ರೇಸ್ನಲ್ಲಿದ್ದಾರೆ.
ಕೆನಡಾದ ಸಂಸತ್ತಿನಲ್ಲಿ ಮಾತನಾಡಿದ ಚಂದ್ರ ಆರ್ಯ “ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ, ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು, ಸುಮಾರು ಐದು ಕೋಟಿ ಕನ್ನಡಿಗರಿಗೆ ಹಮ್ಮೆಯ ವಿಚಾರ.
ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು”. ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್ಕುಮಾರ್ ಹಾಡಿರುವ ಭಾವಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳುವ ಮೂಲಕ ಮಾತು ಮುಗಿಸಿದರು.
ಇನ್ನು ಚುನಾವಣೆಗೆ ಮುನ್ನವೆ ಹಲವಾರು ಯೋಜನೆಗಳನ್ನು ಘೋಷಿಸಿರುವ ಚಂದ್ರಆರ್ಯ “2040 ರಲ್ಲಿ ನಿವತ್ತಿ ವಯಸ್ಸನ್ನು ಎರಡು ವರ್ಷಗಳವರೆಗೆ ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ಟೈನ್ ಅನ್ನು ಒಂದು ರಾಷ್ಟ್ರವಾಗಿ ಗುರುತಿಸುವುದು” ಹೀಗೆ ಹಲವಾರು ಭರವಸೆಗಳನ್ನು ಈಗಾಗಲೇ ನೀಡಿದ್ದಾರೆ.
ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್ಕುಮಾರ್ ಹಾಡಿರುವ ಭಾವಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳುವ ಮೂಲಕ ಮಾತು ಮುಗಿಸಿದರು.

