By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭ, ಸರಳವಾಯ್ತು ಕನ್ನಡಿಗರ ಅಮೇರಿಕ ಹಾದಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭ, ಸರಳವಾಯ್ತು ಕನ್ನಡಿಗರ ಅಮೇರಿಕ ಹಾದಿ
LatestMain PostTop Storiesರಾಜ್ಯ-Karnataka

ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭ, ಸರಳವಾಯ್ತು ಕನ್ನಡಿಗರ ಅಮೇರಿಕ ಹಾದಿ

US consulate opens in Bengaluru, visa services to begin later

Published January 17, 2025
Share
4 Min Read
US consulate
SHARE

ಬೆಂಗಳೂರು, ಜ.17: ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭವಾಗಬೇಕೆಂಬ ನಗರವಾಸಿಗಳ ಹಾಗೂ ಕರ್ನಾಟಕದ ಜನತೆಯ ಕನಸು ಕೊನೆಗೂ ಸಾಕಾರಗೊಂಡಿದೆ. ಯುಎಸ್ ಕಾನ್ಸುಲೇಟ್ ತಾತ್ಕಾಲಿಕ ಕಚೇರಿಯ ಉದ್ಘಾಟನೆ ನಗರದ ಖಾಸಗಿ ಹೋಟೆಲ್​​ನಲ್ಲಿ ಶುಕ್ರವಾರ ನೆರವೇರಿತು. ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಭಾರತದಲ್ಲಿರುವ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಕಚೇರಿಗೆ ಚಾಲನೆ ನೀಡಲಾಯಿತು.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ‌ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ, ಸಂಸದ ಡಾ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಭಾಗಿಯಾಗಿದ್ದರು. ಹಾಗೇ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಷಾ, ಕ್ರಿಸ್ ಗೋಪಾಲಕೃಷ್ಣನ್ ಕೂಡ ಭಾಗವಹಿಸಿದ್ದರು.

ಕರ್ನಾಟಕದ ಜನರು ಅಮೆರಿಕಾ ವೀಸಾಕ್ಕಾಗಿ ಇಲ್ಲಿಯವರೆಗೆ ದೆಹಲಿ, ಚೆನ್ನೈ, ಹೈದರಾಬಾದ್​​ ಮತ್ತು ಮುಂಬೈಗೆ ಹೋಗಬೇಕಿತ್ತು. ಆದರೆ ಇನ್ಮುಂದೆ ಈ ಕಷ್ಟ ಇರುವುದಿಲ್ಲ. ಕನ್ನಡಿಗರು ಇನ್ಮುಂದೆ ಬೆಂಗಳೂರಿನಲ್ಲೇ ವೀಸಾ ಪಡೆಯಬಹುದಾಗಿದೆ. ಆದರೆ, ವೀಸಾ ಸೇವೆ ಇನ್ನೂ ತಡವಾಗಲಿದೆ.

ವಿದೇಶಾಂಗ ಸಚಿವ ಎಸ್​ ಜೈಶಂಕರ್​ ಹೇಳಿದ್ದೇನು..?
ಈಗಾಗಲೇ 12 ದೂತಾವಾಸ ಕಚೇರಿ ಬೆಂಗಳೂರಲ್ಲಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ತೆರೆಯಬೇಕೆಂದು ನಮ್ಮ ಬಯಕೆ ಇದೆ. ಅಮೆರಿಕ ಮತ್ತು ಭಾರತದ ಬಾಂಧವ್ಯ ವೃದ್ಧಿಗೆ ನಿರಂತರ ಪ್ರಯತ್ನ ನಡೆಯುತ್ತಿದೆ. ಬೆಂಗಳೂರಿಗೆ ಸಾಕಷ್ಟು ಸಾಮರ್ಥ್ಯ ಇದ್ದು ಅದರ ಬಳಕೆಯಾಗಬೇಕು. ಬೆಂಗಳೂರಿನಲ್ಲಿ 1 ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ 10 ವರ್ಷ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು, ಅದರ ಮಹತ್ವ ಅರಿಯಬೇಕು ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದರು.

ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿದ್ದೇನೆ. ಅಲ್ಲಿನ ಹೊಸ ಸರ್ಕಾರದ ಜೊತೆ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ನೀಡುವ ಪ್ರಕ್ರಿಯೆ ಆರಂಭಿಸುವ ಕುರಿತಾಗಿ ಚರ್ಚಿಸಲಿದ್ದೇನೆ. ಶೀಘ್ರದಲ್ಲೇ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ಸೇವೆ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

ಹೊರ ದೇಶದಲ್ಲಿ 35 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅಧ್ಯಯನ‌ ಮಾಡುತ್ತಿದ್ದಾರೆ. 50 ಲಕ್ಷ ಭಾರತೀಯ ಕುಟುಂಬಗಳಿವೆ. ಈ ದೂತವಾಸದಿಂದ ಅವರಿಗೆ ವೀಸಾ ಸೇವೆ ಹೆಚ್ಚಿನ‌ ಅನುಕೂಲವಾಗಲಿದೆ. ಈಗ ಬೆಂಗಳೂನಿಂದ ಸ್ಯಾನ್ ಫ್ರಾನ್ಸ್‌ಸಿಸ್ಕೋಗೆ ವಾರದಲ್ಲಿ ಮೂರು ದಿನ ವಿಮಾನ ಸಂಚರಿಸುತ್ತಿದೆ. ಇದರಿಂದ ಅಧ್ಯಯನ, ಶಿಕ್ಷಣ, ತಂತ್ರಜ್ಞಾನ, ರಕ್ಷಣಾ ಕ್ಷೇತ್ರದಲ್ಲಿ ಅಮೆರಿಕಾ-ಬೆಂಗಳೂರಿನ ಸಂಬಂಧ ವೃದ್ಧಿಸಲು ಅನುಕೂಲವಾಗಲಿದೆ ಎಂದರು.

2023ರಲ್ಲಿ ಮೋದಿಯವರು ಬೆಂಗಳೂರು ಕಾನ್ಸುಲೇಟ್ ಆರಂಭದ ಅಗತ್ಯವಿದೆ‌ ಎಂದು ಪ್ರತಿಪಾದಿಸಿದ್ದರು. ನಾನು ಬೆಂಗಳೂರಿಗೆ ಬಂದಾಗಲೆಲ್ಲ ಅಮೆರಿಕಾ ದೂತವಾಸ ಕಚೇರಿ ಯಾವಾಗ ಆರಂಭವಾಗುತ್ತದೆ ಎಂಬ ಪ್ರಶ್ನೆ ಬರುತ್ತಿತ್ತು.‌ ನನಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧ ಇದೆ. ನಾನು ಬೆಂಗಳೂರಿನಲ್ಲಿ‌ ಶಿಕ್ಷಣ ಪಡೆದಿದ್ದೆ. ಬೆಳಗಾವಿ ಜಿಲ್ಲೆಯ‌ ಚಿಕ್ಕೋಡಿಯಿಂದ ನನ್ನ ವೃತ್ತಿ ಬದುಕು ಆರಂಭಿಸಿದ್ದೇನೆ. ಹೀಗಾಗಿ ಒಂದು ವಿಶೇಷ ಆಸಕ್ತಿ ಇತ್ತು ಎಂದು ತಿಳಿಸಿದರು.

ದೂತಾವಾಸ ಆರಂಭದ ಬೆನ್ನಲ್ಲೇ ಕ್ರೆಡಿಟ್ ವಾರ್ :
ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭದ ಬೆನ್ನಲ್ಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮಧ್ಯೆ ಅಮೆರಿಕ ದೂತಾವಾಸ ಕಚೇರಿಯ ಕ್ರೆಡಿಟ್ ವಾರ್ ಆರಂಭವಾಗಿದೆ. ಒಂದೆಡೆ, ಪ್ರಧಾನಿ ಮೋದಿ ಹಾಗೂ ಜೈಶಂಕರ್ ಪ್ರಯತ್ನದಿಂದಲೇ ಇದು ಸಾಕಾರಗೊಂಡಿದೆ ಎಂದು ಬಿಜೆಪಿ ನಾಯಕರು ವಾದಿಸಿದರೆ, ಕಚೇರಿ ಆರಂಭಿಸಲು ತಾವೂ ಶ್ರಮ ಹಾಕಿದ್ದಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮತ್ತೊಂದೆಡೆ, ಬಿಜೆಪಿ ಸಂಸದರು ಅಥವಾ ವಿದೇಶಾಂಗ ಸಚಿವರ ಇಚ್ಛೆಯಿಂದ ಇದು ಸಾಕಾರವಾಗಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದ್ದಾರೆ. ಆದರೆ, ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಡಿದ ಮಾತುಗಳೇ ಕ್ರೆಡಿಟ್ ವಾರ್​ನ ಅಸಲಿಯತ್ತನ್ನು ಬಹಿರಂಗಪಡಿಸಿದಂತಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಸತತ ಪ್ರಯತ್ನದಿಂದ ಹಾಗೂ ಕೊಡುಗೆಯಿಂದ ಬೆಂಗಳೂರಿನಲ್ಲಿ ಅಮೆರಿಕದ ದೂತಾವಾಸ ಕಚೇರಿ ಸಾಕಾರವಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುರುವಾರ ಹೇಳಿದ್ದರು

ಮುಂದುವರಿದು, 2006 ರಲ್ಲಿ ನಾನು ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸವನ್ನು ಸ್ಥಾಪಿಸಲು ಪ್ರಸ್ತಾಪಿಸಿದ್ದೆ ಮತ್ತು ಅದರ ಬಗ್ಗೆ ವಿದೇಶಾಂಗ ಸಚಿವಾಲಯದೊಂದಿಗೆ ಚರ್ಚೆ ನಡೆಸಿದ್ದೆ. ಅಲ್ಲಿಂದ ಯುಎಸ್ ಕಾನ್ಸುಲೇಟ್ ಸ್ಥಾಪನೆಯ ಪ್ರಯಾಣವು ಪ್ರಾರಂಭವಾಗಿತ್ತು. ದುರದೃಷ್ಟವಶಾತ್, ಯುಪಿಎ ಆಡಳಿತಾವಧಿಯಲ್ಲಿ, ಮತ್ತೊಂದು ರಾಜ್ಯದ ಮುಖ್ಯಮಂತ್ರಿಯಿಂದಾಗಿ ರಾಜಕೀಯ ಒತ್ತಡದಿಂದ ಕಾನ್ಸುಲೇಟ್ ಬೇರೆಡೆಗೆ ಸ್ಥಳಾಂತರಕ್ಕೆ ಕಾರಣವಾಯಿತು. ಆದರೂ ನಾನು ದೃಢ ನಿಶ್ಚಯದಿಂದ ಇದ್ದೆ. 2018 ರ ಮೇ 31 ರಂದು, ಮುಖ್ಯಮಂತ್ರಿಯಾಗಿ, ನಾನು ಆಗಿನ ಭಾರತದಲ್ಲಿನ ಯುಎಸ್ ರಾಯಭಾರಿ ಕೆನೆತ್ ಜಸ್ಟರ್ ಅವರನ್ನು ಭೇಟಿ ಮಾಡಿದ್ದೆ ಮತ್ತು ಬೆಂಗಳೂರಿನ ಯುಎಸ್ ದೂತಾವಾಸಕ್ಕಾಗಿ ನ್ಯಾಯಸಮ್ಮತವಾದ ಹಕ್ಕನ್ನು ಪ್ರತಿಪಾದಿಸಿದ್ದೆ. ಈ ಯಶಸ್ಸು ಬೆಂಗಳೂರಿನ ಜಾಗತಿಕ ಪ್ರಾಮುಖ್ಯತೆಯಲ್ಲಿ ಸಾಮೂಹಿಕ ಪ್ರಯತ್ನ ಮತ್ತು ನಂಬಿಕೆಯ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಕುಮಾರಸ್ವಾಮಿ ಗುರುವಾರ ಟ್ವೀಟ್ ಮಾಡಿದ್ದರು.

ಡಿಕೆ ಶಿವಕುಮಾರ್ ಹೇಳಿದ್ದೇನು?
ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭಿಸಲು ಸುಮಾರು 25 ವರ್ಷಗಳಿಂದ ಪ್ರಯತ್ನ ನಡೆದಿತ್ತು. ಆದರೆ ಕಾರಣಾಂತರಗಳಿಂದ ಸಾಕಾರಗೊಂಡಿರಲಿಲ್ಲ. ಅಟಲ್ ಬಿಹಾರಿ ವಾಜಪೇಯಿ ಪ್ರಧಾನಮಂತ್ರಿಯಾಗಿದ್ದಾಗ ಮನವಿ ಸಲ್ಲಿಕೆ ಮಾಡಲಾಗಿತ್ತು.

ಆಗ ಕರ್ನಾಟಕದಲ್ಲಿ ಎಸ್ಎಂ ಕೃಷ್ಣ ಮುಖ್ಯಮಂತ್ರಿ ಆಗಿದ್ದರು. ಅವರ ನೇತೃತ್ವದಲ್ಲಿ ಮನವಿ ಮಾಡಿದ್ದೆವು. ಅದಾದ ನಂತರ ಎಸ್ಎಂ ಕೃಷ್ಣ ವಿದೇಶಾಂಗ ಸಚಿವರಾದರು. ಆಗಲೂ ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಆರಂಭಿಸಲು ಪ್ರಯತ್ನಿಸಲಾಗಿತ್ತು. ಆದರೆ ಸಾಕಾರಗೊಂಡಿರಲಿಲ್ಲ ಎಂದರು. ಇದೀಗ ಅಂತಿಮವಾಗಿ ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಉದ್ಘಾಟನೆಯಾಗಿರುವುದು ಸಂತಸ ತಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

You Might Also Like

ಬಾಲ್ಯದ ಕಷ್ಟದ ದಿನಗಳನ್ನು ನೆನೆದ ಸಿಎಂ ಸಿದ್ದರಾಮಯ್ಯ

ವೆಂಕಟೇಶ್ವರ ಸ್ವಾಮಿಯ ಕ್ಷಮೆ ಕೋರಿ 11 ದಿನದ ಪ್ರಾಯಶ್ಚಿತ ದೀಕ್ಷೆ ಕೈಗೊಂಡ ಡಿಸಿಎಂ ಪವನ್ ಕಲ್ಯಾಣ್

ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿ ಆಕ್ರೋಶ

ಆದರ್ಶ ಜೀವನಕ್ಕೆ ವಚನ ಸಾಹಿತ್ಯದ ಅರಿವು ಅಗತ್ಯ : ಪ್ರೊ. ಪ್ರಸನ್ನ ಕುಮಾರ್ ಕೆ.

ಮೇಘಾಲಯದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ -ಇಬ್ಬರನ್ನ ಹೊಡೆದು ಕೊಂದ ಜನ

TAGGED:US ConsulateUS consulate In Bengaluru
Share This Article
Facebook Copy Link Print
Previous Article Randeep Surjewala ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿವಾದಕ್ಕೆ ತೆರೆ ಎಳೆದ ಸುರ್ಜೆವಾಲಾ
Next Article Mumbai Police ಸೈಫ್ ಅಲಿ ಖಾನ್ ​ಮೇಲೆ ದಾಳಿ ಪ್ರಕರಣ : ಆರೋಪಿಯನ್ನು ಬಂಧಿಸಿದ ಮುಂಬೈ ಪೊಲೀಸರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Supreme Leader
ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನೂ ಮುಗಿಸುತ್ತೇವೆ : ಇಸ್ರೇಲ್
ವಿದೇಶ-International
March 4, 2026
Qatar
ಇರಾನ್ ದಾಳಿ ಹಿನ್ನೆಲೆಯಲ್ಲಿ ನೈಸರ್ಗಿಕ ಅನಿಲ ಪೂರೈಕೆ ನಿಲ್ಲಿಸಿದ ಕತಾರ್, ಭಾರತದಕ್ಕೂ ಎಫೆಕ್ಟ್
ರಾಷ್ಟ್ರೀಯ-National
March 4, 2026
Mojtaba Khamenei
ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಆಯ್ಕೆ
ವಿದೇಶ-International
March 4, 2026
Ac Ac Ac
ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ, ಬೆಂಗಳೂರು ಐದು ಮಂದಿ ಸಾವು
ರಾಜ್ಯ-Karnataka
March 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up