By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನೆಲಮಂಗಲದಲ್ಲಿ ಚಿರತೆ ಪ್ರತ್ಯಕ್ಷ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ನೆಲಮಂಗಲದಲ್ಲಿ ಚಿರತೆ ಪ್ರತ್ಯಕ್ಷ

Latestಬೆಂಗಳೂರು-Bengaluru

ನೆಲಮಂಗಲದಲ್ಲಿ ಚಿರತೆ ಪ್ರತ್ಯಕ್ಷ

Leopard sighted in Nelamangala

Published January 17, 2025
Share
2 Min Read
Leopard
SHARE

ಬೆಂಗಳೂರು ಜ.17: ಬೆಂಗಳೂರಿನಲ್ಲಿ ಚಿರತೆ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ಇಂದು ಒಂದು ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ ಮತ್ತೊಂದು ದಿನ ಇನ್ಯಾವುದೋ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಇದನ್ನು ಪತ್ತೆ ಮಾಡುವುದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಕಳೆದ ದಿನ ನೆಲಮಂಗಲದಲ್ಲಿ ಚಿರತೆ ದೃಶ್ಯ ಸೆರೆಯಾಗಿದೆ.

ಕಳೆದ ದಿನ ರಾತ್ರಿ ನೆಲಮಂಗಲದ ಮಂಜುನಾಥ್ ಎಂಬುವವರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸಿಸಿಟಿವಿಯಲ್ಲಿ ಚಿರತೆ ದೃಶ್ಯ ಸೆರೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಮಧ್ಯರಾತ್ರಿ ಮಂಜುನಾಥ್ ಎಂಬುವವರ ಜಮೀನಿನಲ್ಲಿ ಚಿರತೆ ಚಲನವಲನ ಕಂಡು ಬಂದಿದೆ. ಆದರೆ ಈ ಚಿರತೆಯಿಂದ ಯಾವುದೇ ಹಾನಿಯಾಗಿಲ್ಲ. ಚಿರತೆ ಕಾಣಿಸಿಕೊಂಡಾಗಿನಿಂದಲೂ ಜನ ನಿದ್ದೆಗೆಡುವಂತಾಗಿದೆ. ಮನೆಯಿಂದ ಹೊರಬರಲು ಭಯಪಡುವಂತಾಗಿದೆ.

ಇನ್ನೂ ಇತ್ತೀಚೆಗೆ ಬೆಂಗಳೂರಿನ ಬನಶಂಕರಿಯಲ್ಲಿ ಚಿರತೆ ಹಾಗೂ ಅದರ ಮರಿಗಳ ಓಟಾಟದ ದೃಶ್ಯ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ಬನಶಂಕರಿಯ ಆರನೇ ಹಂತದ ಮೊದಲೇ ಬ್ಲಾಕ್‌ನ ತುರಹಳ್ಳಿ ಫಾರೆಸ್ಟ್ ಬಳಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. ಇವುಗಳು ಈಗಾಗಲೇ ಹತ್ತಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಕೊಂದು ಹಾಕಿದೆ ಎಂದು ಸ್ಥಳಿಯರು ಆರೋಪ ಮಾಡಿದ್ದಾರೆ. ಈ ಹಿಂದೆ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಚಿರತೆ ದಾಳಿ ಮಾಡಿದ ವರದಿಯಾಗಿತ್ತು. ಹೀಗಾಗಿ ಸಂಜೆ ರಾತ್ರಿಯಾದರೆ ಸಾಕು ಜನ ಹೊರಬರಲು ಭಯಪಡುತ್ತಿದ್ದಾರೆ.

ಇನ್ನೂ ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸ್ಥಗಿತಗೊಳಿಸಿದೆ. ಕಳೆದ ಹತ್ತು ದಿನಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಚಿರತೆ ಮಾತ್ರ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. ಡ್ರೋನ್ ಕ್ಯಾಮೆರಾ, ಕ್ಯಾಮೆರಾ ಟ್ರ್ಯಾಪ್, ಕ್ಯಾಂಪಸ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾ ಹಾಗೂ ಕೂಂಬಿಂಗ್ ಸಮಯದಲ್ಲಿ ಚಿರತೆಯ ಯಾವುದೇ ಚಲನವಲನ ಕಂಡು ಬಂದಿಲ್ಲ. ಹೀಗಾಗಿ ಕಾರ್ಯಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

ಚಿರತೆ ಸೆರೆಗೆ ಕಾರ್ಯಾಚರಣೆ :
ಚಿರತೆ ಸೆರೆ ಕಾರ್ಯಾಚರಣೆಗಾಗಿ ಮೈಸೂರು ಪ್ರಾದೇಶಿಕ ವಿಭಾಗದ ಒಟ್ಟು 70 ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಚಿರತೆ ಕಾರ್ಯ ಪಡೆ, ಆನೆ ಕಾರ್ಯ ಪಡೆ ಸಿಬ್ಬಂದಿ ಹಾಗೂ 70 ಇನ್ಫೋಸಿಸ್‌ ಸಿಬ್ಬಂದಿಗಳನ್ನು ಒಳಗೊಂಡ 12 ಜಂಟಿ ತಂಡಗಳನ್ನು ರಚಿಸಲಾಗಿತ್ತು. ಈ ತಂಡವು ಕೂಂಬಿಂಗ್‌ ಕಮ್‌ ಡ್ರೈವಿಂಗ್‌ ಆಪರೇಷನ್‌ ಕೈಗೊಂಡು ಚಿರತೆ ಪತ್ತೆಗೆ ಶ್ರಮಿಸಿತ್ತು. ಆದರೆ ಚಿರತೆ ಚಲನವಲನವಾಗಲಿ, ಹೆಜ್ಜೆ ಗುರುತು ಆಗಲಿ ಅಥವಾ ಯಾವುದೇ ರೀತಿಯ ಕುರುಹುಗಳು ಪತ್ತೆಯಾಗಿಲ್ಲ. ಡಿಸೆಂಬರ್ 31ರಂದು ಕಾಣಿಸಿಕೊಂಡ ಚಿರತೆ ಈವರೆಗೂ ಹಿಡಿಯಲಾಗಿಲ್ಲ. ಹೀಗಾಗಿ ಸ್ಥಳೀಯರಲ್ಲಿ ಹಾಗೂ ಉದ್ಯೋಗಿಗಳಲ್ಲಿ ಆತಂಕ ಹೆಚ್ಚಾಗಿದೆ.

You Might Also Like

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರಿಗೆ ವಿದೇಶ ಪ್ರವಾಸದ ಭಾಗ್ಯ : ವಿಜಯೇಂದ್ರ ಆರೋಪ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

ಭಾರತದ ಜನರಿಗೆ ಸೇವೆ ಸಲ್ಲಿಸುವುದು ನನ್ನ ಏಕೈಕ ಗುರಿ: ಮೋದಿ

ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪರಮೇಶ್ವರ್ ನಿವಾಸದ ಬಳಿ ಸಾರಾ ಗೋವಿಂದ್ ಹೇಳಿಕೆ

TAGGED:leopard
Share This Article
Facebook Copy Link Print
Previous Article Namma Metro ಬೆಂಗಳೂರಿಗರೇ ಗಮನಿಸಿ : ಜ.19ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
Next Article V Somanna ಬೆಂಗಳೂರು ಹೊರವಲಯದಲ್ಲಿ 2 ಹೊಸ ರೈಲ್ವೆ ಟರ್ಮಿನಲ್ ನಿರ್ಮಾಣ : ವಿ.ಸೋಮಣ್ಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up