ರಾಯಚೂರು: ಕ್ರೂಸರ್ ವಾಹನವೊಂದು ಟೈರ್ ಸ್ಫೋಟಗೊಂಡು ರಸ್ತೆಯಲ್ಲಿ ಉರುಳಿಬಿದ್ದ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಮಂಗಳವಾರ ರಾತ್ರಿ 10:30ರ ಸುಮಾರಿಗೆ ನಡೆದಿದೆ.
ಮಂತ್ರಾಲಯದ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹಯವದನ(18), ಸುಜಯೇದ್ರ (22) ಹಾಗೂ ಅಭಿಲಾಷ್(20) ಮತ್ತು ಕ್ರೂಸರ್ ಚಾಲಕ ಕಂಸಾಲಿ ಶಿವ (24) ಮೃತಪಟ್ಟವರು ಎಂದು ತಿಳಿದುಬಂದಿದೆ.ಗಾಯಗೊಂಡ 10 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂತ್ರಾಲಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನವು ನರಹರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹಂಪಿಗೆ ತೀರ್ಥಯಾತ್ರೆಗೆ ಹೋಗುತ್ತಿತ್ತು. ಸಿಂಧನೂರಿನ ಅರಗಿನಮರ ಶಿಬಿರದ ಬಳಿ ಮುಂಜಾನೆ ಅಪಘಾತ ಸಂಭವಿಸಿದೆ.
ಸಿಂಧನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಟ್ಟ ಮಂಜಿನ ನಡುವೆ ವೇಗವಾಗಿ ಚಲಿಸುತ್ತಿದ್ದ ವಾಹನದ ಆಕ್ಸಿಲ್ ಕಟ್‌ಆಗಿ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದೆ ,ಸಿಂಧನೂರು ಸಂಚಾರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಘಟನೆ ಹಿನ್ನೆಲೆಯಲ್ಲಿ ಮಂತ್ರಾಲಯ ಶ್ರೀಗಳು ಸ್ಥಳಕ್ಕೆ ಆಗಮಿಸಿ ಮಾಹಿತಿಯನ್ನ ಪಡೆದುಕೊಂಡಿದ್ದಾರೆ.

