By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಿಢೀರ್ ಸುದ್ದಿಗೋಷ್ಠಿ ನಡೆಸಿ ಶ್ರೀರಾಮುಲುಗೆ ತಿರುಗೇಟು ನೀಡಿದ ಜನಾರ್ದನ ರೆಡ್ಡಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > ದಿಢೀರ್ ಸುದ್ದಿಗೋಷ್ಠಿ ನಡೆಸಿ ಶ್ರೀರಾಮುಲುಗೆ ತಿರುಗೇಟು ನೀಡಿದ ಜನಾರ್ದನ ರೆಡ್ಡಿ
Blog

ದಿಢೀರ್ ಸುದ್ದಿಗೋಷ್ಠಿ ನಡೆಸಿ ಶ್ರೀರಾಮುಲುಗೆ ತಿರುಗೇಟು ನೀಡಿದ ಜನಾರ್ದನ ರೆಡ್ಡಿ

Janardhana Reddy hits back at Sriramulu i

Published January 23, 2025
Share
2 Min Read
Janardhana Reddy hits back at Sriramulu i
SHARE

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣಬಡಿದಾಟ ಜೋರಾಗಿದೆ. ಇದರ ಮಧ್ಯೆ ಕೇಸರಿ ಮನೆಯಲ್ಲಿ ಮತ್ತೊಂದು ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಚಿವ ಶ್ರೀರಾಮುಲು ಆಕ್ರೋಶಗೊಂಡಿದ್ದು, ಬಿಜೆಪಿ ತೊರೆಯುವ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಗಣಿಧಣಿ ಜನಾರ್ದನ ರೆಡ್ಡಿ ಮಾತನಾಡಿದ್ದಾರೆ. ಪಕ್ಷ ಬಿಡೋದು ಅವರ ವೈಯಕ್ತಿಕ ವಿಚಾರ. ಹೋಗುವುದಾದರೆ ಅವರು ಹೋಗಲಿ. ಪಕ್ಷ ಬಿಟ್ಟು ಹೋಗುವಾಗ ನನ್ನ ಮೇಲೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ರೆಡ್ಡಿ ತಿರುಗೇಟು ನೀಡಿದ್ದಾರೆ.

ಶ್ರೀರಾಮುಲು ನನ್ನ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಅದರ ಬಗ್ಗೆ ಸ್ಪಷ್ಟನೆ ಕೊಡುವುದಕ್ಕೆ ಬಂದಿದ್ದೇನೆ. ಮೊದಲಿಗೆ ನಾನು ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿಗೆ ಸೇರಿದ್ದೇನೆ. ನನ್ನ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನ ಮಾಡಿದ್ದೇನೆ. 18 ಕ್ಷೇತ್ರದಲ್ಲಿ ಓಡಾಟ ಮಾಡಿದ್ದೇನೆ. ಬಳ್ಳಾರಿ ಬಿಟ್ಟು ಬೇರೆ ಕಡೆಗಳಲ್ಲಿ ಓಡಾಟ ಮಾಡಿದ್ದೇನೆ. ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಅಂತ ಹೇಳಿದ್ದೇನೆ ಎಂದರು.

ಬಳ್ಳಾರಿಗೆ ಹೋಗಲು ಆಗುತ್ತಿರಲಿಲ್ಲ. ಅದಾದ ಮೇಲೆ ನನಗೆ ಸುಪ್ರೀಂಕೋರ್ಟ್ ಅನುಮತಿ ಕೊಟ್ಟಿತು‌. ಸಂಡೂರು ಎಸ್‌ಟಿ ಮೀಸಲು ಕ್ಷೇತ್ರ. ನಾನು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ರಾಮುಲು ಅವರು ಮೂರು ದಿನ ತಡವಾಗಿ ಸಂಡೂರು ಕ್ಷೇತ್ರಕ್ಕೆ ಬಂದ್ರು. ಅವರೊಟ್ಟಿಗೆ ನಾನು ಕೆಲಸ ಮಾಡಿದ್ದೇನೆ. ಸಿಎಂ ಆದಿಯಾಗಿ ಸರ್ಕಾರವೇ ಬಂದು ಕುಳಿತಿತ್ತು. ಹಣದ ಹೊಳೆ ಹರಿಸಿದ್ರು, ಹೀಗಾಗಿ, ನಮಗೆ ಸೋಲಾಯಿತು. ನಾನು ಛಾಡಿ ಹೇಳುವ ಕೆಳಮಟ್ಟಕ್ಕೆ ಹೋಗುವುದಿಲ್ಲ‌. ಅವರಿಗೆ ಅಭದ್ರತೆ ಕಾಡುತ್ತಿರಬೇಕು ಎಂದು ದೂರಿದರು.

ಇನ್ನೂ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿಯನ್ನು ಮಣಿಸಲು ಹೇಗಾದರೂ ಮಾಡಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಕರೆದುಕೊಳ್ಳುವ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಬಾಂಬ್‌ ಸಿಡಿಸಿದ್ದಾರೆ.

ಪಕ್ಷ ಬಿಡೋದು ರಾಮುಲು ವೈಯಕ್ತಿಕ ವಿಚಾರ. ಪಕ್ಷ ಬಿಟ್ಟು ಹೋದ್ರೆ ಹೋಗಲಿ. ಆದ್ರೆ ನನ್ನ ಮೇಲೆ ಆರೋಪ ಮಾಡಿ ಹೋಗೋದು ಸರಿಯಲ್ಲ. ಅವರು ಕಾಂಗ್ರೆಸ್​ಗೆ ಹೋಗ್ತಾರಾ ಇನ್ನೆಲ್ಲಿಗೆ ಹೋಗ್ತಾರೆ ಅವರಿಗೆ ಬಿಟ್ಟಿದ್ದು. ಡಿಕೆಶಿ ಅವರು ಸತೀಶ್ ಜಾರಕಿಹೊಳಿಯವರನ್ನು ಮಣಿಸಲು ರಾಮುಲುನ ಪಕ್ಷಕ್ಕೆ ಹೇಗಾದರೂ ಕರೆದುಕೊಳ್ಳೋ ಪ್ರಯತ್ನ ಮಾಡ್ತಿದ್ದಾರೆ. ರಾಮುಲುಗೆ ಬಳ್ಳಾರಿಯಲ್ಲಿ ಇರೋ ವಾತಾವರಣ ನೋಡಿಕೊಂಡು ಡಿಕೆಶಿ ಅವರನ್ನು ಕರೆದುಕೊಳ್ಳುವ ಪ್ರಯತ್ನ ಮಾಡ್ತಿದ್ದಾರೆ. ಈ ಕುರಿತು ಬಳ್ಳಾರಿ ಭಾಗದಲ್ಲೆಲ್ಲ ಜನ ಮಾತಾಡ್ತಿದ್ದಾರೆ. ಇಡೀ ಬಳ್ಳಾರಿಯಲ್ಲಿ ಇದರ ಬಗ್ಗೆ ದೊಡ್ಡ ಸುದ್ದಿ ಹಬ್ಬಿದೆ ಎಂದು ಇದೇ ವೇಳೆ ತಿಳಿಸಿದರು.

ಇದೇ ವೇಳೆ ಹಳೆಯ ಘಟನೆಯನ್ನು ಮೆಲುಕು ಹಾಕಿದ ಜನಾರ್ದನ ರೆಡ್ಡಿ, ರಾಮುಲು ಅವರನ್ನು ನಾನು ಬಾಲ್ಯದಿಂದಲೂ ನೋಡಿದ್ದೇನೆ. ರಾಮುಲು ಅವರ ಮಾವ ರೈಲ್ವೇ ಬಾಬು ಅವರನ್ನು ಕೊಲೆ ಮಾಡಲಾಗುತ್ತದೆ. 1991ರಲ್ಲಿ ಆದ ಭೀಕರ ಕೊಲೆ ಅದು. ಆಗ ರಾಜಕೀಯ ಶತ್ರುಗಳ ವಿರುದ್ಧ ಪ್ರತೀಕಾರ ತೀರಿಸಲು ಶ್ರೀರಾಮುಲು ಮುಂದಾಗಿದ್ದರು. ಅವರು ಚಾಕು, ಬೆನ್ನಿಗೆ ಲಾಂಗು ಹಿಡಿದುಕೊಂಡು 40 ಜನ ಬೆಂಬಲಿಗರ ಜೊತೆ ಬಂದಿದ್ರು. ಅಂದು ರಾಮುಲು ಅವರನ್ನು ಕಾಪಾಡಿಕೊಳ್ಳಬೇಕಾದ ಸ್ಥಿತಿ ಇತ್ತು. ಅವರ ಮೇಲೂ ಜೀವ ಬೆದರಿಕೆ ಇತ್ತು. ರಕ್ಷಣೆಗಾಗಿ ರಾಮುಲು ಹುಡುಗರ ಜೊತೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದರು. ಅಂದು ರಾಮುಲು ಅವರನ್ನು ನಾವು ಉಳಿಸಿಕೊಳ್ಳಬೇಕಾಗಿತ್ತು. ನಮ್ಮ ತಾಯಿ ಕಾಪಾಡು ಅವನನ್ನು ಎಂದಿದ್ರು. ಅಂದು ನಾನು ಅವರ ಜೊತೆಗೆ ನಿಂತೆ. ನಾನು ಅವರನ್ನು ಉಳಿಸಿಕೊಂಡೆ ಎಂದು ಹೇಳಿದರು.

You Might Also Like

ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಅನುವಾದ ದೋಷಗಳ ಖಂಡಿಸಿದ ವಿದ್ಯಾರ್ಥಿಗಳ ಬಂಧನ

ಇನ್ಮುಂದೆ ತಡರಾತ್ರಿ 1 ಗಂಟೆವರೆಗೆ ಓಪನ್ ಇರಲಿವೆ ಬಾರ್, ಹೋಟೆಲ್, ರೆಸ್ಟೋರೆಂಟ್‌ಗಳು

ತುಮಕೂರು ಜಿಲ್ಲೆಗೆ ಎಲ್ಲೋ ಅಲರ್ಟ್ ಘೋಷಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

ವೇದಿಕೆಯಲ್ಲೇ ಕುಸಿದು ಬಿದ್ದ ತಮಿಳು ನಟ ವಿಶಾಲ್, ಆಸ್ಪತ್ರೆಗೆ ದಾಖಲು

ವಯನಾಡ್ ಲೋಕಸಭೆ ಉಪಚುನಾವಣೆ : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ

TAGGED:Gali Janardhan ReddyJanardhan ReddySriramulu
Share This Article
Facebook Copy Link Print
Previous Article ವೇಶ್ಯಾವಾಟಿಕೆ ಆರೋಪ : ಮಸಾಜ್​ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರ ದಾಳಿ
Next Article Thailand Same Sex marriage ʼಸಲಿಂಗ ವಿವಾಹʼಕ್ಕೆ ಥಾಯ್ಲೆಂಡ್‌ ಮಾನ್ಯತೆ, ಒಂದೇ ದಿನ 300 ಜೋಡಿಗಳ ಮದುವೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು
ಬೆಂಗಳೂರು-Bengaluru
February 18, 2026
ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?
ರಾಜ್ಯ-Karnataka
February 18, 2026
ರಾಜ್ಯದಲ್ಲಿ ಪ್ರಾಣಿಗಳ ರಾಜಕೀಯ : ನಾಯಿ-ಕೋತಿ-ದನಗಳನ್ನು ಬಳಸಿಕೊಂಡು ಕಚ್ಚಾಟ
ರಾಜಕೀಯ | Politics
February 18, 2026
ಡಿಸಿಎಂ ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ
ಸ್ಯಾಂಡಲ್​ವುಡ್-Sandalwood
February 18, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up