ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ಆವಲಹಳ್ಳಿ ಗ್ರಾಮದಲ್ಲಿ ರೂ. 25 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕು, ಉತ್ತರಹಳ್ಳಿ ಹೋಬಳಿ, ಆವಲಹಳ್ಳಿ ಗ್ರಾಮದ ಸರ್ವೆ ನಂ. 43/1 ಮತ್ತು 43/8 ರಲ್ಲಿನ 16700 ಚದರ ಅಡಿ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ ಶೆಡ್ ಮತ್ತು ಕಾಂಪೌಂಡ್ ಅನ್ನು ತೆರವುಗೊಳಿಸಿ, ಸುಮಾರು 25 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ದಕ್ಷಿಣ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

