ಬೆಂಗಳೂರು : ಬಿಜೆಪಿಯವರು ಅನಂತ್ ಕುಮಾರ್ ಹೆಗಡೆಯವರ ವಿರುದ್ಧ ಪ್ರತಿಭಟನೆ ಮಾಡಲಿ! ಈ ಹಿಂದೆ ಅನಂತ್ ಕುಮಾರ್ ಹೆಗಡೆಯವರು ಉತ್ತರ ಕನ್ನಡ ಜಿಲ್ಲೆಯ ಸಂಸದರಾಗಿ, ಕೇಂದ್ರದಲ್ಲಿ ಸಚಿವರಾಗಿದ್ದಾಗ ‘ನಾವು ಸಂವಿಧಾನ ಬದಲಾಯಿಸಲೆಂದೇ ಅಧಿಕಾರಕ್ಕೆ ಬಂದಿದ್ದೇವೆ’ ಎಂದು ಹೇಳಿದ್ದರು.
ಆಗ ಬಿಜೆಪಿಯವರು ಬೂತ್ ಮಟ್ಟದಿಂದ ಏಕೆ ಹೋರಾಟ ಮಾಡಲಿಲ್ಲ? ಮೋದಿಯವರು ಅವರನ್ನು ಸಂಪುಟದಿಂದ ವಜಾಗೊಳಿಸಲಿಲ್ಲ! ಬಿಜೆಪಿಯವರಿಗೆ ಈಗ ಸಂವಿಧಾನದ ನೆನಪಾಯಿತೇ?! ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಸಂವಿಧಾನ ಬದಲಾವಣೆಯ ಕುರಿತು ಮಾತೇ ಆಡಿಲ್ಲವೆಂದು ಸ್ಪಷ್ಟೀಕರಣ ನೀಡಿದ್ದಾರೆ. ಬಿಜೆಪಿಯವರು ಮೊದಲು ಅನಂತ್ ಕುಮಾರ್ ಹೆಗಡೆಯವರ ವಿರುದ್ಧ ಪ್ರತಿಭಟನೆ ಮಾಡಲಿ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು

