ನಾಳೆಯಿಂದಲೇ ಉತ್ಸವದ ವಿಧಿ- ವಿಧಾನ ಆರಂಭ
ಧರ್ಮರಾಯ ದೇವಸ್ಥಾನದಲ್ಲಿ ನಡೆಯಲಿರುವ ಕರಗ
ಏಪ್ರಿಲ್ 4 ರಿಂದ 14ರ ವರೆಗೂ ಕರಗ ಉತ್ಸವ
ಪೂಜಾರಿ ಎ.ಜ್ಞಾನೇಂದ್ರ ಹೊರಲಿರುವ ಕರಗ
ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಉತ್ಸವ ಧರ್ಮರಾಯ ದೇವಸ್ಥಾನದಲ್ಲಿ ಏಪ್ರಿಲ್ 4 ರಿಂದ 14ರ ವರೆಗೂ ಕರಗ ಉತ್ಸವ ನಡೆಯಲಿದೆ.ನಾಳೆ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಆರಂಭವಾಗಲಿದ್ದು ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.
ಕಳೆದ 14 ವರ್ಷಗಳಿಂದ ಕರಗ ಹೊರುತ್ತಿದ್ದ ಪೂಜಾರಿ ಎ.ಜ್ಞಾನೇಂದ್ರ ಅವರೇ ಈ ವರ್ಷವೂ ಕರಗ ಹೊರಲಿದ್ದಾರೆ. ಏಪ್ರಿಲ್ 4 ರಂದು ರಥೋತ್ಸವ ಮತ್ತು ಧ್ವಜಾರೋಹಣ ನಡೆಯಲಿದೆ. ಏ.5 ರಿಂದ ಏ.8 ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ಇರಲಿದೆ.
ಏ.9 ರಂದು ಆರತಿ ದೀಪಗಳು, ಏ.10 ರ ಗುರುವಾರ ಹಸಿ ಕರಗ, ಏ.11 ರಂದು ಹೊಂಗಲು ಸೇವೆ, ಏ.12 ಶನಿವಾರದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ, ಏ.13 ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ, ಏ.14 ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ಇರಲಿದೆ.
ಬೆಂಗಳೂರು ಕರಗ ಹಿನ್ನೆಲೆಯಲ್ಲಿ ಧರ್ಮರಾಯ ದೇವಸ್ಥಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಬೆಳಗ್ಗೆಯಿಂದಲೇ ದೇವಾಲಯದ ಸ್ವಚ್ಛತಾ ಕಾರ್ಯ ನಡೆದಿದೆ. ಸಿಬ್ಬಂದಿಯು ದೇವಾಲಯ, ರಥ ಸೇರಿದಂತೆ ಸಂಪೂರ್ಣ ಶುಚಿಗೊಳಿಸುತ್ತಿದ್ದಾರೆ. ಕರಗ ಆಚರಣೆಗಳು ನಾಳೆ ರಾತ್ರಿ 10 ಗಂಟೆಗೆ ಶುರುವಾಗಲಿವೆ.

