ವಾಷಿಂಗ್ಟನ್ : ಮುಂಬೈನ್ ತಾಜ್ ಹೋಟೆಲ್ ಮೇಲಿನ ಉಗ್ರ ದಾಳಿಯ ಮಾಸ್ಟರ್ ಮೈಂಡ್ ತಹವ್ವುರ್ ರಾಣಾ(Tahawwur Rana)ನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಾಳೆ ಬೆಳಗಿನ ಜಾವ ಭಾರತಕ್ಕೆ ಕರೆತರುವ ನಿರೀಕ್ಷೆ ಇದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. 2008ರ 26/11 ದಾಳಿಯ ಮಾಸ್ಟರ್ ಮೈಂಡ್ ತಹಾವೂರ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾರತಕ್ಕೆ ಕರೆತರಲಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಅವರನ್ನು ದೆಹಲಿಗೆ ಕರೆತರಲಾಗುತ್ತದೆಯೇ ಅಥವಾ ಮುಂಬೈಗೆ ಕರೆತರಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದಾಗ್ಯೂ, ಅವರು 26/11 ಯೋಜನೆಯನ್ನು ಕಾರ್ಯಗತಗೊಳಿಸಿದ ಮುಂಬೈಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅವರು ಆರಂಭಿಕ ಕೆಲವು ವಾರಗಳನ್ನು ಎನ್‌ಐಎ ಕಸ್ಟಡಿಯಲ್ಲಿ ಕಳೆಯುತ್ತಾರೆ ಎಂದು ಮೂಲಗಳು ತಿಳಿಸಿವೆ. 2008 ರ ಮುಂಬೈ ದಾಳಿಯಲ್ಲಿ ರಾಣಾ ಆರೋಪಿಯಾಗಿದ್ದರು, ಇದರಲ್ಲಿ 157 ಜನರು ಸಾವನ್ನಪ್ಪಿದ್ದರು.

