By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಲಾರಿ ಮುಷ್ಕರ ಅಂತ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಲಾರಿ ಮುಷ್ಕರ ಅಂತ್ಯ

LatestMain Postರಾಜ್ಯ-Karnataka

ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಲಾರಿ ಮುಷ್ಕರ ಅಂತ್ಯ

Lorry strike ends after Minister Ramalinga Reddy makes promise

Published April 18, 2025
Share
2 Min Read
Lorry Strike
SHARE

ಬೆಂಗಳೂರು : ಎರಡು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರ ಕೊನೆಗೂ ಅಂತ್ಯಗೊಂಡಿದೆ. ಇಂದು ನಡೆದ ಸಂಧಾನ ಸಭೆಯಲ್ಲಿ ರಾಮಲಿಂಗಾರೆಡ್ಡಿ ಅವರು ಕೆಲ ಬೇಡಿಕೆಗಳನ್ನು ಈಡೇರಿಸುವ ಆಶ್ವಾಸ ನೀಡಿರುವುದರಿಂದ ತಕ್ಷಣದಿಂದಲೇ ಲಾರಿ ಮುಷ್ಕರವನ್ನು ವಾಪಸ್ ಪಡೆಯುತ್ತಿರುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಡೀಸೆಲ್‌ ಬೆಲೆ ಇಳಿಕೆ ಸೇರಿ ಪ್ರಮುಖವಾಗಿ 5 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಏ.14ರ ಮಧ್ಯರಾತ್ರಿಯಿಂದ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಸರಕು ಸಾಗಣೆ ಲಾರಿ ಮುಷ್ಕರ ನಡೆಸಲಾಗುತ್ತಿತ್ತು. ಮುಷ್ಕರ ಕೈ ಬಿಡುವಂತೆ ಮಂಗಳವಾರ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾರಿ ಮಾಲೀಕರೊಂದಿಗೆ ಸಭೆ ನಡೆಸಿದ್ದರು. ಆದರೆ, ಲಾರಿ ಮಾಲೀಕರು ಮುಷ್ಕರದಿಂದ ಹಿಂದೆ ಸರಿದಿರಲಿಲ್ಲ. ಗುರುವಾರ ಸಂಜೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಲಾರಿ ಮಾಲೀಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ, ಲಾರಿ ಮಾಲೀಕರ ಬೇಡಿಕೆಗಳ ಕುರಿತು ಕೂಲಂಕಷವಾಗಿ ಚರ್ಚೆ ನಡೆಸಿ ಅವುಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅದಕ್ಕೆ ಒಪ್ಪಿದ ಲಾರಿ ಮಾಲೀಕರು, ಸಂಜೆಯಿಂದಲೇ ಮುಷ್ಕರ ಹಿಂಪಡೆದಿರುವುದಾಗಿ ಘೋಷಿಸಿದರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಜಿ.ಆರ್‌.ಷಣ್ಮುಗಪ್ಪ, ಡೀಸೆಲ್‌ ದರ ಹೆಚ್ಚಳವಾಗುತ್ತಿದ್ದರೂ ಲಾರಿ ಮಾಲೀಕರಿಗೆ ಸಮರ್ಪಕವಾಗಿ ಬಾಡಿಗೆ ದರ ನಿಗದಿ ಮಾಡಿಲ್ಲ. ಹೀಗಾಗಿ ಆಟೋ, ಟ್ಯಾಕ್ಸಿ ಮಾದರಿಯಲ್ಲಿ ಲಾರಿಗಳಿಗೂ ನಿಗದಿತ ಬಾಡಿಗೆ ಮೊತ್ತ ಸರ್ಕಾರದಿಂದಲೇ ನಿಗದಿ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ. ಒಂದು ತಿಂಗಳಲ್ಲಿ ಲಾರಿಗಳ ಸಾಮರ್ಥ್ಯಕ್ಕೆ ತಕ್ಕಂತೆ ಬಾಡಿಗೆ ದರ ನಿಗದಿ ಮಾಡಲು ಸಾರಿಗೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಅದರೊಂದಿಗೆ ಗಡಿ ಭಾಗದಲ್ಲಿನ ಆರ್‌ಟಿಒ ಚೆಕ್‌ಪೋಸ್ಟ್‌ಗಳನ್ನು ತೆಗೆದುಹಾಕುವ ಸಂಬಂಧ ಹೊರರಾಜ್ಯಗಳಲ್ಲಿನ ವ್ಯವಸ್ಥೆಗಳ ಬಗ್ಗೆ ಅಧ್ಯಯನ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸರ್ಕಾರದ ಭರವಸೆ ಒಪ್ಪಿ ಮುಷ್ಕರ ಹಿಂಪಡೆಯಲಾಗಿದೆ ಎಂದರು. ನಗರದೊಳಗೆ ಸರಕು ಸಾಗಣೆ ವಾಹನಗಳ ಪ್ರವೇಶ ನಿಷೇಧದ ಸಮಯವನ್ನು ಸಡಿಲಗೊಳಿಸುವಂತೆ ಕೋರಲಾಗಿತ್ತು. ಅದಕ್ಕೆ ಪೊಲೀಸ್‌ ಆಯುಕ್ತರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗೆಯೇ, ಕೃಷಿ ಪರವಾನಗಿ ಹೊಂದಿದ ಟ್ರ್ಯಾಕ್ಟರ್‌ಗಳು ನಗರದಲ್ಲಿ ಕಟ್ಟಡ ತ್ಯಾಜ್ಯ ಸಾಗಿಸುವ ಕೆಲಸ ಮಾಡುತ್ತಿರುವುದಕ್ಕೆ ತಡೆಯೊಡ್ಡಿ, ಅದಕ್ಕೆ ಲಾರಿಗಳನ್ನು ಬಳಸುವಂತೆ ನಿಯಮ ರೂಪಿಸುವ ಬಗ್ಗೆಯೂ ಭರವಸೆ ನೀಡಿದ್ದಾರೆ ಎಂದು ಹೇಳಿದರು.

You Might Also Like

ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಘಟಾನುಘಟಿಗಳ ಕೊರತೆ

EOS-8 ಮಿಷನ್ ಯಶಸ್ವಿ ಉಡಾವಣೆ : ಇಸ್ರೋ ಮತ್ತೊಂದು ಮಹತ್ತರ ಸಾಧನೆ

ಇಂದಿನಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ- ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ

ಬಿಹಾರ ಚುನಾವಣೆ : 71 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ

TAGGED:Lorry strike
Share This Article
Facebook Copy Link Print
Previous Article Anil Kumble Anil Kumble Anil Kumble ಡಿಸಿಎಂ ಡಿಕೆಶಿ ಭೇಟಿ ಮಾಡಿದ ಅನಿಲ್ ಕುಂಬ್ಳೆ
Next Article Gang Rape ಯುವತಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ, ರಿಕ್ಷಾಚಾಲಕ ಸೇರಿ ಮೂವರು ಆರೋಪಿಗಳು ವಶಕ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up