ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್
ಟೆಕಿ ಮೇಲೆ ಹಲ್ಲೆ ಮಾಡಿ ನಾಟಕ ಮಾಡಿದ್ದ ವಿಂಗ್ ಕಮಾಂಡರ್
ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಕೇಸ್
ಕನ್ನಡಿಗನ ಮೇಲೆ ಮೊದಲು ಹಲ್ಲೆ ಮಾಡಿದ್ದೇ ಅಧಿಕಾರಿ?
ಸಾಫ್ಟ್‌ವೇರ್ ಉದ್ಯೋಗಿಗೆ ಹಲ್ಲೆ ನಡೆಸಿ ತನ್ನ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಅವರ ವಿರುದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಭಾರತೀಯ ನ್ಯಾಯ ಸಂಹಿತೆ (ಬಿಎಸ್‌ಎಸ್) ಸೆಕ್ಷನ್ 109 (ಕೊಲೆಯತ್ನ), 115(2) (ಮಾರಣಾಂತಿಕ ಹಲ್ಲೆ), 304 (ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324 (ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವುದು), 352 (ಶಾಂತಿಭಂಗ) ರ ಅಡಿ ಶಿಲಾದಿತ್ಯ ಬೋಸ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.
ಶಿಲಾದಿತ್ಯ ಬೋಸ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಅವರ ಪತ್ನಿ ಮಧುಮಿತಾ ದತ್ತ ಅವರು ದೂರು ನೀಡಿದ್ದರು. ದೂರು ಆಧರಿಸಿ ಸಾಫ್ಟ್‌ವೇರ್ ಇಂಜಿನಿಯರ್ ವಿಕಾಸ್ ಕುಮಾರ್ ಅವರನ್ನು ಸೋಮವಾರ (ಏ.21) ರಾತ್ರಿ ಪೊಲೀಸರು ಬಂಧಿಸಿದ್ದರು.
ಆದರೆ, ಶಿಲಾದಿತ್ಯ ಬೋಸ್ ಅವರೇ ವಿಕಾಸ್ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

