ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ಯುವ ರಾಜ್‌ಕುಮಾರ್
ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ
ಪಹಲ್ಗಾಮ್ ದಾಳಿಯನ್ನು ಖಂಡಿಸಿದ ನಟ – ನಟಿಯರು
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಈ ಹೇಯ ಕೃತ್ಯವನ್ನು ಖಂಡಿಸಿ ಸ್ಯಾಂಡಲ್‌ವುಡ್ ನಟ ಶಿವರಾಜ್ ಕುಮಾರ್, ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ರಿವೀನಾ ಟಂಡನ್ ಸೇರಿದಂತೆ ಹಲವರು ಪಹಲ್ಗಾಮ್ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.
ಸದ್ಯ ನಟ ಯುವ ರಾಜ್‌ಕುಮಾರ್ ಅವರು ಹುಟ್ಟುಹಬ್ಬದ ಅಂಗವಾಗಿ ಅವರ ಮುಂಬರುವ ʻಎಕ್ಕʼ ಸಿನಿಮಾದ ಟೀಸರ್ ರಿಲೀಸ್ ಆಗಬೇಕಿತ್ತು. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಟೀಸರ್ ಬಿಡುಗಡೆಯನ್ನು ಚಿತ್ರತಂಡ ಮುಂದೂಡಿದೆ.
ಅದರಂತೆ ʻಎಕ್ಕʼ ಸಿನಿಮಾದ ಟೀಸರ್ ಇಂದು (ಏಪ್ರಿಲ್ 23) ಯುವ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ರಿಲೀಸ್ ಆಗಬೇಕಿತ್ತು. ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಬೆಳಗ್ಗೆ ರಿಲೀಸ್ ಆಗಬೇಕಿದ್ದ ಟೀಸರ್ ಅನ್ನು ಚಿತ್ರತಂಡ ಸಂಜೆ 5 ಗಂಟೆಗೆ ಮುಂದೂಡಿದೆ.