ಯುವರಾಜ್ ಕುಮಾರ್ ಅಭಿನಯದ ”ಎಕ್ಕ “ ಟೀಸರ್ ರಿಲೀಸ್ಆಗಿದೆ. 1 ನಿಮಿಷ 9 ಸೆಕೆಂಡ್ ಇರುವ ಯುವ ಟೀಸರ್ ಸೈಕ್ ಆಗಿದೆ. ಹೊಸ ಅವತಾರದಲ್ಲಿ ಯುವರಾಜ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ರೋಹಿತ್ ಪದಕಿ ನಿರ್ದೇಶನದ ಈ ಚಿತ್ರದಲ್ಲಿ ಯುವರಾಜ್‌ಕುಮಾರ್ ನಾಯಕನಾಗಿ, ಸಂಪದ ಹಾಗೂ ಸಂಜನಾ ಆನಂದ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್ ಕುಮಾರ್ ಸಂಕಲನ ಒದಗಿಸಿದ್ದಾರೆ.
ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾವ್ ಅವರ ಕೆಆರ್‌ಜಿ ಸ್ಟುಡಿಯೋಸ್, ಜಯಣ್ಣ ಹಾಗೂ ಭೋಗೇಂದ್ರ ಅವರ ಜಯಣ್ಣ ಫಿಲ್ಮ್ಸ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಜೂನ್-6 ರಂದು ಎಕ್ಕ ಸಿನಿಮಾ ತೆರೆಗೆ ಎಂಟ್ರಿ ಕೊಡುತ್ತಿದೆ.

