ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ ರಾಜೀನಾಮೆ!
ಯತ್ನಾಳ್ ಗೆ ಟಕ್ಕರ್ ಕೊಟ್ಟು ರಾಜೀನಾಮೆ
ಯತ್ನಾಳ್ ಸವಾಲ್ ಗೆ ಟಕ್ಕರ್
ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ
ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಸವಾಲ್ ಸ್ವೀಕರಿಸಿ ಸಚಿವ ಶಿವಾನಂದ ಪಾಟೀಲ ರಾಜೀನಾಮೆ ನೀಡಿದ್ದಾರೆ. ಯತ್ನಾಳ್ ವಿರುದ್ಧ ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ಶಿವಾನಂದ್ ಪಾಟೀಲ್ ವ್ಯಕ್ತಪಡಿಸಿದ್ದರು.ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿ, ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಬಸವನಗೌಡ ಪಾಟೀಲ್ ಯತ್ನಾಳ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

