ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡಲು ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಭಾರತೀಯ ದಾಳಿಯಲ್ಲಿ ಸುಮಾರು 100 ಕ್ಕೂ ಹೆಚ್ಚು ಪಾಕಿಸ್ತಾನಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತವು ಆಪರೇಷನ್ ಸಿಂಧೂರ್ ಮೂಲಕ ಸೂಕ್ತ ಪ್ರತ್ಯುತ್ತರ ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರದ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಡೆದಿದೆ. ದೇಶದ ಇಬ್ಬರು ಮಹಿಳಾ ಮಿಲಿಟರಿ ಅಧಿಕಾರಿಗಳಾದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಲು ಮಾಧ್ಯಮಗಳ ಮುಂದೆ ಕಾಣಿಸಿಕೊಂಡರು.
ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ ಆಪರೇಷನ್ ಸಿಂದೂರ ಹೆಸರಿನ ಏರಸ್ಟ್ರೈಕ್ ಯಶಸ್ವಿ ಕಾರ್ಯಾಚರಣೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಬೆಳಗಾವಿಯರು.
ಸೋಫೀಯಾ ಪತಿ ತಾಜುದ್ದೀನ್ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು. ಪತಿ, ಪತ್ನಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸೋಫಿಯಾ ಖುರೇಷಿ ಅವರ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. 2015 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಜುದ್ದೀನ್ ಸೋಫಿಯಾ ಅವರದ್ದು ಪ್ರೇಮ ವಿವಾಹ. ಕರ್ನಲ್ ಸೋಫಿಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾ ನಿವಾಸಿಯಾಗಿದ್ದಾರೆ. ಸೋಫಿಯಾ ಖುರೇಷಿ ಜಮ್ಮುವಿನಲ್ಲಿ ಕರ್ನಲ್ ಆಗಿ, ಪತಿ ತಾಜುದ್ದೀನಿ ಬಾಗೇವಾಡಿ ಸಹ ಜಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಗುಜರಾತ್ ಮೂಲದ 35 ವರ್ಷದ ಕರ್ನಲ್ ಸೋಫಿಯಾ ಖುರೇಷಿ, ಭಾರತೀಯ ಸೇನೆಯ ಸಿಗ್ನಲ್ ಕಾರ್ಪ್ಸ್‌ನಲ್ಲಿ ಅಧಿಕಾರಿಯಾಗಿದ್ದಾರೆ. 1999 ರಲ್ಲಿ ಅಧಿಕಾರಿಗಳ ತರಬೇತಿ ಅಕಾಡೆಮಿಯಿಂದ ನಿಯೋಜನೆಗೊಂಡ ನಂತರ, ಅವರು ದಂಗೆ ನಿಗ್ರಹ ಕಾರ್ಯಾಚರಣೆಗಳು ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಸೋಫಿಯಾ ಅವರ ಮಿಲಿಟರಿಯೊಂದಿಗಿನ ಸಂಬಂಧವು ತಲೆಮಾರುಗಳಷ್ಟು ಹಳೆಯದು. ಅವರ ಅಜ್ಜ ಮತ್ತು ತಂದೆ ಇಬ್ಬರೂ ಸೈನ್ಯದಲ್ಲಿದ್ದರು. 2006 ರಲ್ಲಿ, ಅವರನ್ನು ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಡಿಯಲ್ಲಿ ನಿಯೋಜಿಸಲಾಯಿತು.

