ಚಂಡೀಗಢ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಚಂಡೀಗಢ ಸರ್ಕಾರ 2 ತಿಂಗಳುಗಳ ಕಾಲ ಪಟಾಕಿ ನಿಷೇಧಿಸಿದೆ.
ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಯುದ್ಧ ಭೀತಿ ಹಿನ್ನೆಲೆ ಇದೀಗ ಚಂಡೀಗಢ ಸರ್ಕಾರ ಎರಡು ತಿಂಗಳುಗಳ ಪಟಾಕಿ ನಿಷೇಧಿಸಿದೆ. ಮದುವೆ, ಶುಭ ಸಮಾರಂಭಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ. ಇನ್ನೂ ರಾಜಸ್ಥಾನದ ಜೈಸಲ್ಮೇರ್‌ನಲ್ಲಿಯೂ ಪಟಾಕಿ ಸಿಡಿಸುವುದರ ಜೊತೆಗೆ ಮಾರಾಟ ಹಾಗೂ ಖರೀದಿಯನ್ನು ನಿಷೇಧಿಸಿಲಾಗಿದೆ.
ಈ ಕುರಿತು ಚಂಡೀಗಢ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಶಾಂತ್ ಕುಮಾರ್ ಯಾದವ್ ಮಾತನಾಡಿ, 2023ರ ಬಿಎನ್‌ಎಸ್ ಸೆಕ್ಷನ್ 163ರ ಅಡಿಯಲ್ಲಿ 2025ರ ಮೇ 09 ರಿಂದ ಜುಲೈ 7ರವರೆಗೆ ಪಟಾಕಿ ನಿಷೇಧಿಸಲಾಗಿದೆ ಎಂದು ಆದೇಶಿಸಿದ್ದಾರೆ.
ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕ್ ನಡುವಿನ ಕಾದಾಟ ಹೆಚ್ಚಾಗುತ್ತಿದೆ. ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ `ಆಪರೇಷನ್ ಸಿಂಧೂರ’ದಡಿಯಲ್ಲಿ ಭಾರತೀಯ ಸೇನೆ ಪಾಕ್ ಮೇಲೆ ವಾಯುದಾಳಿ ನಡೆಸಿತ್ತು. ಬಳಿಕ ಗುರುವಾರ ರಾತ್ರಿ ಪಾಕಿಸ್ತಾನ ನಡೆಸಿದ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತವು ತಕ್ಕ ಉತ್ತರ ನೀಡಿದೆ.

