ಸಂಕಷ್ಟದಲ್ಲಿ ಚೈತ್ರಾ ಕುಂದಾಪುರ ವಿವಾಹ
ಮದುವೆ ಆದ ಕೆಲವೇ ದಿನಕ್ಕೆ ತಂದೆಯಿಂದಲೇ ಬಂತು ಆರೋಪ
‘ಚೈತ್ರಾಗೆ ಯಾರೂ ದೊಡ್ಡ ಸ್ಥಾನಮಾನ ಕೊಡುವ ಅಗತ್ಯವಿಲ್ಲ
ತಂದೆಯ ಆರೋಪದ ಬೆನ್ನಲ್ಲೇ ತಿರುಗೇಟು ಕೊಟ್ಟ ಚೈತ್ರಾ
ಚೈತ್ರಾ ಕುಂದಾಪುರ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ .. ಒಂದು ಟೈಮ್ ನಲ್ಲಿ ಚೈತ್ರ ಕುಂದಾಪುರ ಭಾಷಣ ಕೊಳೋದಕ್ಕೆ ಜನ ಮುಗಿ ಬೀಳ್ತಾ ಇದ್ರು
ನಂತರ ಅದೆಷ್ಟೋ ಆರೋಪ , ಸೆರೆವಾಸ ,ಅಪಮಾನ ಅವಮಾನ ಇವುಗಳನ್ನೆಲ್ಲ ಸಹಿಸಿ ಹೊರಗಡೆ ಬಂದು ಯಾವೊಬ್ಬನನ್ನು ಕೇರ್ ಮಾಡದೇ ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಕಾಲಿಟ್ಟು ಅಲ್ಲಿ ಕೆಲವೊಂದು ಫೈಟ್ ಗಳನ್ನ ಮಾಡಿ ಮತ್ತೆ ಹೆಸರು ಗಳಿಸಿದ ಏಕೈಕ ಹೆಣ್ಣು ಅಂದ್ರೆ ಚೈತ್ರಾ ಕುಂದಾಪುರ..
ಅಳಿಸಿದ ಹೆಸರನ್ನು ಮತ್ತೆ ಎತ್ತಿ ಕಾಣುವಂತೆ ಮಾಡಿದ ಮಾಡೆಲ್, ಭಾಷಣಕಾರ್ತಿ, ಬಿಗ್ ಬಾಸ್ ಚೈತ್ರಾ ಕುಂದಾಪುರಯಾಕೆ ಇವತ್ತು ಚೈತ್ರಾ ಕುಂದಾಪುರ ವಿಷ್ಯ ಹೇಳ್ತಿದೀನಿ ಅಂದ್ರೆ ಅವರ ತಂದೆ ಮಾಡಿರುವ ಆರೋಪದ ಬಗ್ಗೆ ಹೌದು
ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ತಮ್ಮ ಮಗಳ ಮದುವೆ ಮತ್ತು ಹಣಕಾಸಿನ ವ್ಯವಹಾರಗಳ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಗಳ ಮದುವೆಗೆ ಸರಿಯಾದ ಆಮಂತ್ರಣ ನೀಡಿರಲಿಲ್ಲ ಎಂದು ಕೂಡ ದೂರಿದ್ದಾರೆ . ಚೈತ್ರಾ ಕುಂದಾಪುರ ಇತ್ತೀಚೆಗೆ ಶ್ರೀಕಾಂತ್ ಕಶ್ಯಪ್ ಹೆಸರಿನ ವ್ಯಕ್ತಿಯನ್ನು ಮದುವೆಯಾಗಿದ್ದಾರೆ .
ಹೀಗಿರುವಾಗ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ದೊಡ್ಡ ಆರೋಪ ಒಂದನ್ನು ಮಾಡಿದ್ದಾರೆ. ‘ನನ್ನ ಮಗಳು ವಿವಾಹಕ್ಕೆ ನನಗೆ ಸರಿಯಾದ ಆಮಂತ್ರಣ ಕೊಟ್ಟಿಲ್ಲ’ ಎಂದು ಆರೋಪಿಸಿದ್ದಾರೆ.
‘ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ.
ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ’ ಎಂದು ಬಾಲಕೃಷ್ಣ ಹೇಳಿದ್ದಾರೆ.‘ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನನ್ನು ಮನೆಯಲ್ಲಿ ಬಿಟ್ಟು ಅಮ್ಮ-ಮಗಳು ಬೀಗ ಹಾಕಿ ಹೋಗಿದ್ದರು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ. ಚೈತ್ರಾ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ’ ಎಂದು ಬಾಲಕೃಷ್ಣ ಅಸಮಾಧಾನ ಹೊರಹಾಕಿದ್ದಾರೆ.
‘ಚೈತ್ರಾಗೆ ಯಾರೂ ದೊಡ್ಡ ಸ್ಥಾನಮಾನ ಕೊಡುವ ಅಗತ್ಯವಿಲ್ಲ. ತಂದೆಯನ್ನೇ ದೂರವಿಟ್ಟವರು ಸಂಸ್ಕೃತಿಯ ಬಗ್ಗೆ ಮಾತನಾಡುವುದು ಎಷ್ಟು ಸರಿ? ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಅದು ಹೆಮ್ಮೆಯ ವಿಷಯ ಆಗುತ್ತಿತ್ತು. ಮೋಸದ ಹಣದಲ್ಲಿ ಆಕೆ ಕೊಟ್ಟು ಏನು’ ಪ್ರಯೋಜನ ಎಂದಿದ್ದಾರೆ ‘ಚೈತ್ರಾ ತಂದೆ ಬಾಲಕೃಷ್ಣ ಅವ್ರು .
ಇನ್ನು ಮದುವೆ ಸಂದರ್ಭ ಆಕೆ ನನ್ನಲ್ಲಿ ಹಣ ಕೇಳಿದಳು. ನಾನು ಹೋಟೆಲ್ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ. ಚೈತ್ರಾ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರ ಪತಿ ನಮ್ಮ ಮನೆಯಲ್ಲಿ ಇದ್ದವನು. ಅವನು ಕೂಡ ಕಳ್ಳ. ಅವರಿಗೆ ಮಾನ ಮರ್ಯಾದೆ ಇಲ್ಲ. ಈಗ ನನ್ನ ಕುಟುಂಬದ ಮಾನ ಮರ್ಯಾದೆ ಕೂಡ ತೆಗೆದರು’ ಎಂದು ಬೇಸರ ಹೊರಹಾಕಿದ್ದಾರೆ ‘ನಾನು ಸತ್ಯ, ನ್ಯಾಯ, ಧರ್ಮದಲ್ಲಿರುವ ವ್ಯಕ್ತಿ. ನನ್ನ ದೊಡ್ಡ ಮಗಳು ಶಾಲೆ ಕೆಲಸ ಮಾಡಿಕೊಂಡು, ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ.
ನನ್ನ ದೊಡ್ಡ ಮಗಳ ಮೇಲೆ ಚೈತ್ರಾ ಸುಳ್ಳು ಅಪವಾದ ಹಾಕಿದ್ದಳು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲಿ ಈಕೆ ಹಣ ಹೊಡೆದಿದ್ದಾಳೆ. ಆ ಹಣವನ್ನು ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಾಳೆ. ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ, ಬಾಂಡ್ ಮೇಲೆ ಸಾಲ ಪಡೆದಿದ್ದಾಳೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ’ ಎಂದು ಚೈತ್ರಾ ಅವರ ಇತಿಹಾಸ ತೆರೆದಿಟ್ಟಿದ್ದಾರೆ ಅವರ ತಂದೆ.ಆಕೆ ನನ್ನ ಜೀವನದಲ್ಲಿ ಬರಲೇಬಾರದು. ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ

