ರಾಯಚೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ. ವಿ.ಸೋಮಣ್ಣನವರು ಸಿಂಧನೂರು ರೈಲು ನಿಲ್ದಾಣದಲ್ಲಿಂದು ಗಿಣಿಗೇರಾ-ರಾಯಚೂರು ನೂತನ ರೈಲು ಮಾರ್ಗದ ಭಾಗವಾದ ಸಿಂಧನೂರು-ರಾಯಚೂರು (81 ಕಿ.ಮೀ) ರೈಲು ಮಾರ್ಗ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ, ಹಿಂದುಳಿದ ವರ್ಗಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಶಿವರಾಜ ಎಸ್. ತಂಗಡಗಿಯವರು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ ರಾಯರೆಡ್ಡಿಯವರು, ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ, ಡಾ|| ಎಸ್. ಶಿವರಾಜ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಸನಗೌಡ ಬಾದರ್ಲಿ, ಶ್ರೀ ಶರಣಗೌಡ ಪಾಟೀಲ್ ಬಯ್ಯಾಪುರ ಅವರು ಹಾಗೂ ಹಿರಿಯ ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

