ಡಾ.ಜಿ.ಪರಮೇಶ್ವರ್ ಅವರ ಒಡೆತನದ ವಿದ್ಯಾಸಂಸ್ಥೆಗಳ ಮೇಲೆ ದಾಳಿ
ದಾಳಿಯಿಂದ ಕಂಗಾಲಾಗಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್
ಪರಮೇಶ್ವರ್ ಅವರ ಬೆಂಬಲಕ್ಕೆ ನಿಂತ ಡಿಕೆಶಿ ಮತ್ತು ಕೈ ನಾಯಕರು
ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದ ಸಿ.ಎಂ
ತುಮಕೂರಿನ ಹೆಗ್ಗೆರೆಯಲ್ಲಿರುವ ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ಮರಳೂರುದಿಣ್ಣೆಯಲ್ಲಿರುವ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು ಹಾಗೂ ಹೆಗ್ಗೆರೆಯಲ್ಲಿರುವ ಪರಮೇಶ್ವರ್ ಅವರ ಹುಟ್ಟೂರಿನ ಮನೆ, ತುಮಕೂರಿನ ಹೊರವಲಯದಲ್ಲಿರುವ ಹಳೆಯ ಎಚ್ಎಂಎಸ್ ಕಾಲೇಜು, ನೆಲಮಂಗಲದ ಬಳಿಯಿರುವ ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು ಈಗ ಜಾರಿ ನಿರ್ದೇಶನಾಲಯದ ದಾಳಿಯಿಂದ ಕಂಗಾಲಾಗಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೂರವಾಣಿಯಲ್ಲಿ ಪರಮೇಶ್ವರ್‌ರೊಂದಿಗೆ ಮಾತನಾಡಿ ಮಾಹಿತಿ ಕಲೆ ಹಾಕಿದ್ದು, ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನಾರೋಗ್ಯಕ್ಕಾಗಿ ಚಿಕಿತ್ಸೆ ಪಡೆದು ಪರಮೇಶ್ವರ್ ಮನೆಗೆ ಆಗಮಿಸಿ. ಸುದೀರ್ಘ ಕಾಲ ಚರ್ಚೆ ನಡೆಸಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಹಾಸನ ಸಂಸದ ಶ್ರೇಯಸ್ ಪಟೇಲ್, ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಸೇರಿದಂತೆ ಹಲವು ಅಧಿಕಾರಿಗಳು ಗೃಹಸಚಿವರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

