ಮೈಸೂರು : ತಮ್ಮ ಹಿರಿಯ ಪುತ್ರಿ ಪ್ರೀತಿಸಿದ ಯುವಕನೊಂದಿಗೆ ಮನೆಬಿಟ್ಟು ಹೋಗಿದ್ದರಿಂದಲೇ ಮನನೊಂದು ಕುಟುಂಬದ ಮೂವರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಕೆರೆಯಲ್ಲಿ ಮುಳುಗಿ ಮಹದೇವಸ್ವಾಮಿ, ಪತ್ನಿ ಮಂಜುಳಾ, ಕಿರಿಯ ಮಗಳು ಸೇರಿ ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ ಅವರ ಹಿರಿಯ ಮಗಳು ಅರ್ಪಿತಾ ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಈ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತ ದೇಹಗಳಿಗಾಗಿ ಅಗ್ನಿ ಶಾಮಕದಳ ಶೋಧ ನಡೆಸಿದೆ. ಘಟನೆ ಸಂಬಂಧ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

