Road Rage : ಬೆಂಗಳೂರಲ್ಲಿ ಅನ್ಯಭಾಷಿಕರ ಹಾವಳಿ ಮಿತಿಮೀರುತ್ತಿದೆ. ರಾಜ್ಯದ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಆಟೋ ಚಾಲಕರು ಮತ್ತು ಗ್ರಾಹಕರ ನಡುವಿನ ಜಗಳಗಳು, ಅದರಲ್ಲೂ ಪರಭಾಷಿಕರ ಪುಂಡಾಟಗಳು ಹೆಚ್ಚಾಗಿವೆ. ಬಹುತೇಕ ಎಲ್ಲ ಪ್ರಕರಣಗಳಲ್ಲೂ ಆಟೋ ಚಾಲಕರೇ ದೂಷಣೆಗೆ ಒಳಗಾಗುತ್ತಿದ್ದರು. ಆದರೆ ಇದೀಗ ಆಟೋ ಚಾಲಕನಿಗೆ ಯುವತಿಯೊಬ್ಬಳು ನಡುರಸ್ತೆಯಲ್ಲೇ ಚಪ್ಪಲಿಯಲ್ಲಿ ಹೊಡೆದ ಘಟನೆ ನಡೆದಿದೆ.
ಬೆಂಗಳೂರಿನ ಬೆಳ್ಳಂದೂರು ಸರ್ಕಲ್‌ನಲ್ಲಿ ಶನಿವಾರ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ. ಆಟೋ ಚಾಲಕನೇ ಘಟನೆಯ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು ಇದರ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೇಶದ ಮೂಲೆಮೂಲೆಯಿಂದ ಬಂದಿರುವ ಲಕ್ಷಾಂತರ ಜನರಿಗೆ ಬೆಂಗಳೂರು ಆಶ್ರಯ ನೀಡಿದೆ. ಉದ್ಯೋಗ ಅರಸಿಕೊಂಡು ಬಂದಿರುವ ಅದೆಷ್ಟೋ ಜನರು ಇಲ್ಲಿಯೇ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ರಾಜ್ಯದ ರಾಜ್ಯಧಾನಿಯಲ್ಲಿ ಅನ್ಯಭಾಷಿಕರ ಅಟ್ಟಹಾಸ ಇತ್ತೀಚಿನ ದಿನಗಳಲ್ಲಿ ಜೋರಾಗಿದೆ. ಇದಕ್ಕೆ ಸಾಕ್ಷಿ ಈ ಯುವತಿ. ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬನ ಮೇಲೆ ಹೊರ ರಾಜ್ಯದ ಯುವತಿಯೊಬ್ಬಳು ಚಪ್ಪಲಿಯಿಂದ ಹೊಡೆದಿದ್ದಾಳೆ. ಬೆಂಗಳೂರಿನ ಬೆಳ್ಳಂದೂರು ಸರ್ಕಲ್‌ನಲ್ಲಿ ಶನಿವಾರ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ.
ಘಟನೆಯ ದೃಶ್ಯವನ್ನು ಆಟೋ ಚಾಲಕನೇ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು ಇದರ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ವಾಹನಕ್ಕೆ ಆಟೋ ಸ್ವಲ್ಪ ತಾಗಿರುವುದು ಇದಕ್ಕೆ ಕಾರಣ. ತನ್ನ ಸ್ಕೂಟರ್ ಗೆ ಆಟೋ ಚಾಲಕ ಆಟೋ ತಾಗಿಸಿದ ಎಂದು ಜಗಳಕ್ಕೆ ಇಳಿದ ಯುವತಿ ಆಟೋ ಚಾಲಕನೊಂದಿಗೆ ವಾಗ್ವಾದ ನಡೆಸಿದ್ದಾಳೆ. ಇವರಿಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದಿದ್ದು, ಯುವತಿ ತನ್ನ ಚಪ್ಪಲಿ ತೆಗೆದುಕೊಂಡು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾಳೆ. ಘಟನೆಯ ಸ್ಥಳದಲ್ಲಿ ಸಾಕಷ್ಟು ಮಂದಿ ಸೇರಿದ್ದರೂ ಯಾರಿಗೂ ಆಕೆಯನ್ನು ತಡೆಯುವುದು ಸಾಧ್ಯವಾಗಲಿಲ್ಲ.
ಮಾಹಿತಿ ತಿಳಿದಾಕ್ಷಣ ಸ್ಥಳಕ್ಕೆ ಆಗಮಿಸಿದ ಬೆಳ್ಳಂದೂರು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಆಟೋ ಚಾಲಕ ಮತ್ತು ಯುವತಿ ಇಬ್ಬರನ್ನೂ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

