RCB : RCB ಸಂಭ್ರಮಾಚರಣೆ ವೇಳೆ ಕಾಲ್ತುಳಿದದ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ಇಷ್ಟೊಂದು ಅಭಿಮಾನಿಗಳು ಸೇರುತ್ತಾರೆ ಎಂದು ಯಾರೂ ಊಹೆ ಮಾಡಿರಲಿಲ್ಲ. ಒಂದು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಿದ್ದರಿಂದ ನೂಕುನುಗ್ಗಲಾಗಿ ಕಾಲ್ತುಳಿತ ಸಂಭವಿಸಿದೆ.
ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು ಎಲ್ಲರೂ ಯುವಕ-ಯುವತಿಯರಾಗಿದ್ದಾರೆ. 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಮೃತರ ಕುರ್ಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು.
ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವುದಾಗಿ ತಿಳಿಸಿದ ಸಿಎಂ ಸಿದ್ದರಾಮಯ್ಯ, ತಪ್ಪಿದಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಅನಿರೀಕ್ಷಿತವಾಗಿ ಜನ ಸೇರಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಅವರು ಹೇಳಿದರು.

