ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ 2’ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಟೀಸರ್ನಲ್ಲಿ ಬಾಲಯ್ಯ ಅವರ ಮಾಸ್ ಅವತಾರ ಕಾಣಿಸಿದೆ. ಅಭಿಮಾನಿಗಳು ಊಹೆ ಮಾಡುವುದಕ್ಕಿಂತಲೂ ಹೆಚ್ಚು ಮಾಸ್ ಆಗಿ ನಂದಮೂರಿ ಬಾಲಕೃಷ್ಣ ಅವರು ಕಾಣಿಸಿಕೊಂಡಿದ್ದಾರೆ.
ಜೂನ್ 10ರಂದು ನಂದಮೂರಿ ಬಾಲಕೃಷ್ಣ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಒಂದು ದಿನ ಮುಂಚಿತವಾಗಿಯೇ ‘ಅಖಂಡ 2’ ಸಿನಿಮಾದ ಟೀಸರ್ ಅನಾವರಣ ಮಾಡಲಾಗಿದೆ. ‘ಅಖಂಡ 2’ ಸಿನಿಮಾದಲ್ಲಿ ಬಾಲಯ್ಯ ಅವರು ಸಾಧು ಗೆಟಪ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
‘ಅಖಂಡ 2’ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ನಿರ್ಮಾಪಕರು ಈ ಚಿತ್ರದ ರಿಲೀಸ್ ದಿನಾಂಕ ಘೋಷಿಸಿದ್ದಾರೆ. ಸೆಪ್ಟೆಂಬರ್ 25ರಂದು ಸಿನಿಮಾ ತೆರೆಕಾಣಲಿದೆ ಎಂದು ಖಚಿತಪಡಿಸಿದ್ದಾರೆ.

