ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ಪ್ರಕರಣ
ಆರ್ಥಿಕ ವ್ಯವಹಾರಗಳ ಅನುಮಾನದ ಹಿನ್ನೆಲೆ
ಮಾಜಿ ಸಂಸದ ಡಿ.ಕೆ.ಸುರೇಶ್ ಗೂ ED ಸಮನ್ಸ್ ಜಾರಿ
ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿದೆ.ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಅಂತ ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿ ಬಂದಿತ್ತು.
ಹೀಗಾಗಿ ಐಶ್ವರ್ಯ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.ಗುರುವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ತಿಳಿಸಿದೆ. ಐಶ್ವರ್ಯ ಗೌಡ ಜೊತೆಗೆ ಆರ್ಥಿಕ ವ್ಯವಹಾರಗಳ ಅನುಮಾನದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

