ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರಸ್ಸೆಸ್ ಮತ್ತು ಬಜರಂಗದಳದಿಂದ ಎಂದು ಸಿಎಂ ಸಿದ್ದರಾಮಯ್ಯರವರು ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿಎಂಗೆ ನೋಟಿಸ್ ಜಾರಿ ಮಾಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್ ಗೆ ಉತ್ತರಿಸಬೇಕು ಎಂದು ಹೇಳಲಾಗಿದೆ.
ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರಿಂದ ಇಡೀ ಸದನವೇ ಅಲ್ಲೋಲ ಕಲ್ಲೋಲವಾಗಿತ್ತು. ಅಲ್ಲದೇ ಬಿಜೆಪಿ ಶಾಸಕರು ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ವಾಗ್ದಾಳಿ ಕೂಡಾ ನಡೆಸಿದ್ದರು.
ಈ ಬಗ್ಗೆ ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಎನ್ನುವರು ಸಿದ್ದರಾಮಯ್ಯ ವಿರುದ್ಧ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕೇಸ್ ದಾಖಲಿಸಿಕೊಳ್ಳುವ ಮುನ್ನ ಸಿಎಂ ಸಿದ್ದರಾಮಯ್ಯನವರ ವಾದ ಆಲಿಸಲು ಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಬಿಎನ್ ಎಸ್ಎಸ್ ಸೆಕ್ಷನ್ 223 ಅಡಿಯಲ್ಲಿ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ.
- ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ..?!
- ಇತ್ತ ಬಜೆಟ್ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
- ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
- ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
- ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ

