ನವದೆಹಲಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಕಳುಹಿಸುವ ಮಹತ್ವಾಕಾಂಕ್ಷೆಯ ‘ಆ್ಯಕ್ಸಿಯಂ-4’ ಮಿಷನ್ ಉಡಾವಣೆಗೆ ಜೂನ್ 25ರಂದು ದಿನಾಂಕ ನಿಗದಿಪಡಿಸಲಾಗಿದೆ ಎಂದು ನಾಸಾ ಮಂಗಳವಾರ ಪ್ರಕಟಿಸಿದೆ.
ಆ್ಯಕ್ಸಿಯಂ-4 ಮಿಷನ್ ಜೂನ್ 25 ರಂದು ಬೆಳಗಿನ ಜಾವ 2:31ಕ್ಕೆ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್ ನ ಫಾಲ್ಕನ್-9 ರಾಕೆಟ್ ಉಡಾವಣೆಗೊಳ್ಳಲಿದೆ ಎಂದು ಎಂದು ನಾಸಾ ತಿಳಿಸಿದೆ.
ಕಮಾಂಡರ್ ಪೆಗ್ಗಿ ವಿಟ್ಸನ್ ಅವರು, ಆ್ಯಕ್ಸಿಯಂ-4 ವಾಣಿಜ್ಯ ಕಾರ್ಯಾಚರಣೆಯ ನೇತೃತ್ವವಹಿಸಿದ್ದಾರೆ. ಶುಕ್ಲಾ ಮಿಷನ್ ಪೈಲಟ್ ಆಗಿ, ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸ್ಪೇಸ್‌ಎಕ್ಸ್ ನ ಫಾಲ್ಕನ್ 9 ಉಡಾವಣಾ ವಾಹನದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಾಹ್ಯಾಕಾಶ ಯಾನ ಮುಂದೂಡಿಕೆಯಾಗಿದೆ. ಕಳೆದ ವಾರ ಉಡಾವಣಾ ಪ್ಯಾಡ್‌ನಲ್ಲಿ ಏಳು ಸೆಕೆಂಡುಗಳ ಬಿಸಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯ ಸಮಯದಲ್ಲಿ ಪ್ರೊಪಲ್ಷನ್ ಬೇಯಲ್ಲಿ LOX ಸೋರಿಕೆಯಾಗಿತ್ತು. ಈ ಕುರಿತು ಇಸ್ರೋ ತಂಡ ‘ಆ್ಯಕ್ಸಿಯಂ-4’ ಮತ್ತು ಸ್ಪೇಸ್ ಎಕ್ಸ್ ನ ತಜ್ಞರೊಂದಿಗೆ ಚರ್ಚೆ ನಡೆಸಿ, ಸೋರಿಕೆ ಸರಿಪಡಿಸಲು ಮತ್ತು ಉಡಾವಣೆಗೆ ತೆರವುಗೊಳಿಸುವ ಮೊದಲು ಅಗತ್ಯ ಮೌಲ್ಯೀಕರಣ ಪರೀಕ್ಷೆ ನಡೆಸಲು ನಿರ್ಧರಿಸಿತ್ತು.
- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
- ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
- ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
- ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
- ರೇಮಂಡ್ ಕಂಪನಿಯ ಮಾಜಿ ಅಧ್ಯಕ್ಷ ವಿಜಯಪತ್ ಸಿಂಘಾನಿಯಾ ನಿಧನ

