ವಿಜಯಪುರ: ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದರು. ಯಡಿಯೂರಪ್ಪ ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ. ಮಗನನ್ನ ಅಧ್ಯಕ್ಷ ಸ್ಥಾನದಿಂದ ಇಳಿಸಿ, ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಬೇಕು. ವಿಜಯೇಂದ್ರ ಹಾಗೂ ಯಡಿಯೂರಪ್ಪ ಮೇಲೆ ಹಲವು ಕೇಸ್ ಇವೆ. ಇ.ಡಿ ವಿಚಾರಣೆಗೂ ಹಾಜರಾಗಿದ್ದಾರೆ. ಇಂದಿಲ್ಲ ನಾಳೆ ಜೈಲಿಗೆ ಹೋಗ್ತಾರೆ ಎಂದರು.
ಪೊಲೀಸ್ ಇಲಾಖೆಯಲ್ಲಿ ಸಲೀಂ, ಮುಶ್ರಫ್‌ರಂತಹವರನ್ನ ತಂದ್ರೆ ನಮ್ಮ ಮೇಲೆ ಕೇಸ್ ಆಗ್ತಾವೆ. ಮೊನ್ನೆ ವಿಜಯಪುರದಲ್ಲಿ ನನ್ನ ಮೇಲೆ ಕೇಸ್ ಹಾಕಿಸಿದ್ರು. ಸಲೀಂ ಪೊಲೀಸ್ ಇಲಾಖೆಯಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಯತ್ನಾಳ್ ಮೇಲೆ ಎಷ್ಟು ಕೇಸ್ ಆಗಿವೆ ಎಂದು ಮಾಹಿತಿ ಪಡೆದಿದ್ದಾರೆ. ರಾಜ್ಯದಲ್ಲಿ ಸೂಲಿಬೆಲೆ, ಪ್ರತಾಪ್ ಸಿಂಹ, ಮುತಾಲಿಕ್ ಟಾರ್ಗೆಟ್ ಆಗಿದ್ದಾರೆ ಎಂದು ದೂರಿದರು.
ಮತ್ತೆ ಬಿಜೆಪಿ ಭಿನ್ನಮತೀಯರ ಸಭೆ ಆಗಲಿದೆ. ನಮ್ಮ ಟೀಂ ದೊಡ್ಡದಿದೆ. ತಟಸ್ಥ ಟೀಂ ಸಹ ವಿಜಯೇಂದ್ರ ವಿರುದ್ಧ ಇದೆ. ವಾರದಲ್ಲಿ ಬೆಳಗಾವಿಯಲ್ಲಿ ಸೇರ್ತಿದ್ದೇವೆ. ಅತೃಪ್ತ ಬಣದಿಂದ ಮತ್ತೊಂದು ಸಭೆ ಎಂದು ತಿಳಿಸಿದರು.
- ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ

