By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಹು ನಿರೀಕ್ಷೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್ ರಿಲೀಸ್, ರಾವಣನಾಗಿ ಯಶ್ ರಾಕಿಂಗ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಬಹು ನಿರೀಕ್ಷೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್ ರಿಲೀಸ್, ರಾವಣನಾಗಿ ಯಶ್ ರಾಕಿಂಗ್

EntertainmentLatestಬಾಲಿವುಡ್​ - Bollywood

ಬಹು ನಿರೀಕ್ಷೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್ ರಿಲೀಸ್, ರಾವಣನಾಗಿ ಯಶ್ ರಾಕಿಂಗ್

Glimpse of the much-awaited ‘Ramayana’ released

Published July 3, 2025
Share
2 Min Read
Ramayana Ramayana Ramayana
SHARE

ಭಾರಿ ನಿರೀಕ್ಷೆ ಹುಟ್ಟಿಸಿರುವ ‘ರಾಮಾಯಣ’ ಸಿನಿಮಾದ ಗ್ಲಿಂಪ್ಸ್ ಅಥವಾ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಗ್ಲಿಂಪ್ಸ್ ಅನ್ನು ಬೆಂಗಳೂರಿನ ನೆಕ್ಸಸ್ ಮಾಲ್ ಸೇರಿದಂತೆ ವಿವಿಧ ನಗರಗಳಲ್ಲಿ ಬೇರೆ ಬೇರೆ ಐಮ್ಯಾಕ್ಸ್ ಪರದೆಗಳಲ್ಲಿ ಬಿಡುಗಡೆ ಮಾಡಲಾಗಿದೆ. ‘ರಾಮಾಯಣ’ ಸಿನಿಮಾನಲ್ಲಿ ರಿಯಾಲಿಟಿ ಮತ್ತು ವಿಎಫ್​ಎಕ್ಸ್ ಎರಡನ್ನೂ ಬಳಸಿ ಅದ್ಭುತ ಲೋಕವೊಂದನ್ನು ಸೃಷ್ಟಿ ಮಾಡಿರುವುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಬ್ರಹ್ಮ, ವಿಷ್ಣು, ಮಹೇಶ್ವರ ದೃಶ್ಯಗಳಿಂದ ಆರಂಭವಾಗುವ ಮೂರು ನಿಮಿಷ ಉದ್ದ ಟೀಸರ್ ಮೊದಲಿಂದ ಕೊನೆಯ ವರೆಗೂ ಅದ್ಧೂರಿತನವನ್ನು ತುಂಬಿಕೊಂಡಿದೆ. ಎಂದೂ ನೋಡಿರದ ರೀತಿಯ ಅದ್ಭುತ ವಿಎಫ್​ಎಕ್ಸ್, ಗ್ರಾಫಿಕ್ಸ್​ಗಳನ್ನು ಬಳಸಲಾಗಿದೆ.

ಟೀಸರ್​​ನಲ್ಲಿ ಸಿನಿಮಾದಲ್ಲಿ ನಟಿಸಿರುವವರ ಹೆಸರು, ತಂತ್ರಜ್ಞರ ಹೆಸರುಗಳನ್ನು ತೋರಿಸಲಾಗಿದೆ. ಇದಕ್ಕೆ ‘ಗೇಮ್ ಆಫ್ ಥ್ರೋನ್ಸ್’ ಅನ್ನು ನೆನಪಿಸುವಂತಿದೆ ಆ ಶೈಲಿ. ಸಿನಿಮಾಕ್ಕೆ ‘ರಾಮಾಯಣ’ ಎಂದು ಹೆಸರಿಡಲಾಗಿದ್ದು, ‘ನಮ್ಮ ಸತ್ಯ, ನಮ್ಮ ಇತಿಹಾಸ’ ಎಂಬ ಅಡಿಬರಹ ಕೊಡಲಾಗಿದೆ. ಟೀಸರ್​ನ ಕೊನೆಯ ಕೆಲವು ಸೆಕೆಂಡುಗಳಿದ್ದಾಗ, ರಣ್​ಬೀರ್ ಕಪೂರ್ ಮರದಿಂದ ಹಾರಿ ಬಿಲ್ಲು ಹೊಡೆಯುತ್ತಿರುವ ದೃಶ್ಯ ಕಾಣಿಸಿಕೊಳ್ಳುತ್ತದೆ. ಅದರ ಬಳಿಕ ಯಶ್ ರಾವಣನ ವೇಷದಲ್ಲಿರುವ ದೃಶ್ಯವಿದೆ. ಆದರೆ ಯಶ್ ಅವರ ಒಂದು ಕಣ್ಣನ್ನು ಮಾತ್ರವೇ ಟೀಸರ್​ನಲ್ಲಿ ತೋರಿಸಲಾಗಿದೆ. ಮಿಕ್ಕಂತೆ ಇನ್ಯಾವ ಪಾತ್ರಗಳ ದೃಶ್ಯಗಳನ್ನೂ ಸಹ ತೋರಿಸಲಾಗಿಲ್ಲ.

‘ರಾಮಾಯಣ’ ಸಿನಿಮಾವನ್ನು ನಿತೀಶ್ ತಿವಾರಿ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ನಮಿತ್ ಮಲ್ಹೋತ್ರಾ ಬಂಡವಾಳ ಹೂಡಿದ್ದಾರೆ. ಇದು ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಆಗಿದೆ. ಈ ಸಿನಿಮಾಕ್ಕೆ ಸುಮಾರು 800 ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡಲಾಗಿದೆ. ನಟ ಯಶ್ ಅವರು ಈ ಸಿನಿಮಾನಲ್ಲಿ ರಾವಣನ ಪಾತ್ರ ನಿರ್ವಹಿಸುತ್ತಿರುವ ಜೊತೆಗೆ ಸಹ ನಿರ್ಮಾಪಕರೂ ಆಗಿದ್ದಾರೆ. ಸಿನಿಮಾಕ್ಕೆ ಆಸ್ಕರ್ ವಿಜೇತ ಹನ್ಸ್​ಜೈಮರ್ ಸಂಗೀತ ನೀಡಿದ್ದಾರೆ. ಆಸ್ಕರ್ ವಿಜೇತ ಸ್ಟಂಟ್ ಕೋರಿಯೋಗ್ರಾಫರ್ ಸ್ಟಂಟ್ ಮಾಡಿದ್ದಾರೆ. ಹಾಲಿವುಡ್​ನ ಪ್ರತಿಷ್ಠಿತ ಸ್ಟುಡಿಯೋಗಳು ವಿಎಫ್​ಎಕ್ಸ್ ಕಾರ್ಯ ಮಾಡಿವೆ. ಸಿನಿಮಾ 2026ರ ದೀಪಾವಳಿಗೆ ಬಿಡುಗಡೆ ಆಗಲಿದೆ. 2027ರ ದೀಪಾವಳಿಗೆ ಸಿನಿಮಾದ ಎರಡನೇ ಭಾಗ ಬಿಡುಗಡೆ ಆಗಲಿದೆ.

ಕೆಲ ವರ್ಷಗಳ ಹಿಂದೆ ಪ್ರಭಾಸ್ ನಟನೆಯ ರಾಮಾಯಣ ಆಧರಿಸಿದ ಸಿನಿಮಾ ‘ಆದಿಪುರುಷ್’ ಬಿಡುಗಡೆ ಆಗಿತ್ತು. ಆ ಸಿನಿಮಾ ಬಿಡುಗಡೆಗೆ ಮುಂಚೆ ಅದರ ಟೀಸರ್ ಬಿಡುಗಡೆ ಆಗಿತ್ತು. ಆಗ ಸಿನಿಮಾ ಬಹುವಾಗಿ ಟ್ರೋಲ್ ಆಗಿತ್ತು. ಅತ್ಯಂತ ಕೆಟ್ಟದಾಗಿ ತಂತ್ರಜ್ಞಾನವನ್ನು ಬಳಸಿಕೊಂಡಿರುವುದರ ಬಗ್ಗೆ ವ್ಯಂಗ್ಯ ಮಾಡಲಾಗಿತ್ತು.

You Might Also Like

ಸ್ವಪಕ್ಷೀಯರಿಂದಲೇ ಪಿತೂರಿ ನಡೆದಿದೆ ಕೊನೆಗೂ ಸತ್ಯ ಒಪ್ಪಿಕೊಂಡ ಸಿಎಂ । ಹೆಚ್ಡಿಕೆ ಲೇವಡಿ

ವೇಶ್ಯಾವಾಟಿಕೆ ಆರೋಪ : ಮಸಾಜ್​ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರ ದಾಳಿ

ಎಷ್ಟೇ ವಿರೋಧ ವ್ಯಕ್ತವಾದರೂ ನೀರಿನ ದರ ಹೆಚ್ಚಳ ಮಾಡೇ ಮಾಡುತ್ತೇವೆ : ಡಿಕೆಶಿ

ರಾಜ್ಯದ ಪ್ರಸ್ತುತ ಪರಿಸ್ಥಿತಿ ನೋಡಿದರೆ ದುಃಖವಾಗುತ್ತದೆ : ಈಶ್ವರಪ್ಪ

ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

TAGGED:Ramayana
Share This Article
Facebook Copy Link Print
Previous Article narayana baramani narayana baramani narayana baramani ವೇದಿಕೆ ಮೇಲೆ ಅವಮಾನಕ್ಕೆ ಮನನೊಂದು ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಎಎಸ್​ಪಿ ಭರಮನಿ ಮನವೊಲಿಸಿದ ಸಿಎಂ
Next Article sasdgg sasdgg sasdgg ಮಹಾದಾಯಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ : ಬಸನಗೌಡ ಪಾಟೀಲ ಎಚ್ಚರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up