ಬೆಳಗಾವಿ: ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದೆ. ಕಾರು- ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ಕೊಲ್ಹಾಪುರ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಈ ದುರಂತ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ದುರ್ಘಟನೆ ನಡೆದಿದೆ. ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನವರು ಎಂದು ತಿಳಿದು ಬಂದಿದೆ. ಮೃತರನ್ನು ಗಿರೀಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ, ಸಂಗು ಅಮರಗೊಂಡ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರಾಧಿಕಾ ಮ್ಯಾಲೇಶಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

