By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: DK Shviakumar : “ದೈವ ಕೈ ಹಿಡಿದು ನಡೆಸಿ ಉನ್ನತ ಸ್ಥಾನಕ್ಕೆ ಮುನ್ನಡೆಸಲಿ” : ಡಿಕೆಶಿಗೆ ರಂಭಾಪುರಿ ಶ್ರೀ ಆಶೀರ್ವಾದ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - DK Shviakumar : “ದೈವ ಕೈ ಹಿಡಿದು ನಡೆಸಿ ಉನ್ನತ ಸ್ಥಾನಕ್ಕೆ ಮುನ್ನಡೆಸಲಿ” : ಡಿಕೆಶಿಗೆ ರಂಭಾಪುರಿ ಶ್ರೀ ಆಶೀರ್ವಾದ

ರಾಜ್ಯ-KarnatakaLatestರಾಜಕೀಯ | Politics

DK Shviakumar : “ದೈವ ಕೈ ಹಿಡಿದು ನಡೆಸಿ ಉನ್ನತ ಸ್ಥಾನಕ್ಕೆ ಮುನ್ನಡೆಸಲಿ” : ಡಿಕೆಶಿಗೆ ರಂಭಾಪುರಿ ಶ್ರೀ ಆಶೀರ್ವಾದ

May God hold his hand and lead him to a higher position": Rambhapuri Sri blesses DK Shivakumar

Published July 8, 2025
Share
4 Min Read
sgadgdg sgadgdg sgadgdg
SHARE

DK Shviakumar :ಸಮಯ ಬಂದಾಗ ಡಿಕೆ ಶಿವಕುಮಾರ್ ಅವರು ದಿಟ್ಟ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ. ಅವರು ನಂಬಿರುವ ದೈವ ಕೈ ಹಿಡಿದು ನಡೆಸಿ ಉನ್ನತ ಸ್ಥಾನಕ್ಕೆ ಮುನ್ನಡೆಸಲಿ” ಎಂದು ಬಾಳೆಹೊನ್ನೂರು ಶ್ರೀಮದ್‌ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಹರಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಮಾತನಾಡಿದ‌ ಶ್ರೀಗಳು”ಕರ್ನಾಟಕದಲ್ಲಿ ಕಾಂಗ್ರೆಸ್ ‌ಪ್ರಚಂಡ ಬಹುಮತ ಗಳಿಸಲು ಡಿ.ಕೆ.ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾದ ನಂತರ ಬಹಳ ಶ್ರಮ ಪಟ್ಟಿರುವುದು ರಾಜ್ಯದ ಜನರಿಗೆ ತಿಳಿದಿದೆ. ಚುನಾವಣೆ ನಂತರ ನಡೆದಿರುವ ಒಳ ಒಪ್ಪಂದ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ತಿಳಿದಿದೆ. ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಆದ ಒಡಂಬಡಿಕೆಯಂತೆ ನಡೆದುಕೊಂಡರೆ ಎಲ್ಲಾ ರಾಜಕಾರಣಿಗಳಿಗೆ ಗೌರವವಿದೆ” ಎಂದರು.

“ನಾಯಕತ್ವದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ನಾಯಕರೇ ಅಲ್ಲಲ್ಲಿ ಮಾತನಾಡಿದ ವಿಚಾರ ಹೊರಬರುತ್ತಿದೆ. ಇದರ ಬಗ್ಗೆ ರಾಷ್ಟ್ರೀಯ ನಾಯಕರು ಸ್ಪಷ್ಟಣೆ ನೀಡಿ ತಿಳಿಗೊಳಿಸಿದರೆ ಜನರಲ್ಲಿ ನೆಮ್ಮದಿ ಉಂಟಾಗಲಿದೆ.‌ ಶಿವಕುಮಾರ್ ಅವರಿಗೂ ಉನ್ನತ ಸ್ಥಾನ ಸಿಕ್ಕರೆ ಅವರಿಗೂ ಸಮಾಧಾನವಾಗಲಿದೆ. ಮುಖ್ಯಮಂತ್ರಿ ಸ್ಥಾನ ದೊರೆಯುವ ತನಕ ಅಧ್ಯಕ್ಷ ಸ್ಥಾನ ಬಿಟ್ಟು ಕೊಡಿ ಎನ್ನುವ ತಾತ್ವಿಕತೆ ಪಕ್ಷದ ಉನ್ನತ ನಾಯಕರಿಗೆ ಇಲ್ಲ. ಆ ಸ್ಥಾನ ಭದ್ರ ಪಡಿಸಿದರೆ,‌ ಈ ಸ್ಥಾನ ಬಿಟ್ಟುಕೊಡುವುದರಲ್ಲಿ ಸಂದೇಹವಿಲ್ಲ. ರಾಷ್ಟ್ರೀಯ ನಾಯಕರು ಈ ಬಗ್ಗೆ ನಿರ್ಣಾಯಕತ್ಮಕವಾಗಿ ತಿಳಿಸದ ಹೊರತು ಬೇರೆಯವರು ತಿಳಿಸಿದರೆ ಪ್ರಯೋಜನವಿಲ್ಲ. ರಾಜಕೀಯದಲ್ಲಿ ರೀತಿ, ನೀತಿ, ನಿಯತ್ತು ಇರಬೇಕಾಗುತ್ತದೆ. ಈ ಹಿಂದೆ ಬಿಜೆಪಿಯಲ್ಲಿ ಆದಂತಹ ಘಟನೆ ನಮ್ಮಗೆಲ್ಲರಿಗೂ ತಿಳಿದಿದೆ. ಇದು ಕಾಂಗ್ರೆಸ್ ಅಲ್ಲಿ ಆಗಬಾರದು ಎಂಬುದು ನಮ್ಮ ಮಾತು” ಎಂದರು.

“ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ‌. ಆದರೆ ಈ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಮಾತನಾಡುತ್ತಿದ್ದಾರೆ. ವಿರೋಧ ಪಕ್ಷದವರು ಈ‌ ಮಾತನ್ನು ಹೇಳಿದರೆ ಬೇರೆ.‌ಆದರೆ ಆಡಳಿತ ಪಕ್ಷದವರೇ ಇದನ್ನು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ಎಂದು ಹೇಳುವುದಿಲ್ಲ. ಆದರೆ, ಅಭಿವೃದ್ಧಿ ಕೆಲಸಗಳನ್ನೂ ಮಾಡಬೇಕು ಎಂದು ಆಗ್ರಹಿಸುತ್ತೇನೆ. ನಾನು ಇಡೀ ರಾಜ್ಯ ‌ಪ್ರವಾಸ ಮಾಡುತ್ತಿದ್ದೇನೆ. ಯಾವುದೇ ಭಾಗಕ್ಕೆ ಹೋದರು ಜನರು ಇದೇ ಕೊರಗನ್ನು ವ್ಯಕ್ತಪಡಿಸುತ್ತಿದ್ದಾರೆ” ಎಂದು ತಿಳಿಸಿದರು.

“ಮೊನ್ನೆಯಷ್ಟೇ ಶಿವಕುಮಾರ್ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ದರ್ಶನ ಮಾಡಿ ಮಾಧ್ಯಮಗಳ ಜೊತೆ ಮಾತನಾಡುವಾಗ, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬ ಮಾತನ್ನು ಹೇಳಿದರು. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ತಂದುಕೊಟ್ಟವರು ಡಿ.ಕೆ. ಶಿವಕುಮಾರ್. ಅವರು ಪಕ್ಷದ ಅಧ್ಯಕ್ಷರಾದ ಬಳಿಕ ಕ್ರಿಯಾಶೀಲರಾಗಿ, ಚುರುಕಾಗಿ ಪಕ್ಷ ಸಂಘಟಿಸಿದರು. ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಆದರೆ ಪಕ್ಷದ ವರಿಷ್ಠರ ಭಾವನೆಗೆ ಸ್ಪಂದಿಸಿ, ಉದಾರ ಮನೋಭಾವದಿಂದ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿ, ಉತ್ತಮ ಕಾರ್ಯ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

“ರಾಜ್ಯದ ನಾಯಕರು ಹಾಗೂ ಪಕ್ಷದ ವರಿಷ್ಠರು ಮುಂದಿನ ದಿನಗಳಲ್ಲಿ ತಮ್ಮ ಒಡಂಬಡಿಕೆಯಂತೆ ಶಿವಕುಮಾರ್ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು. ಆಗ ಇವರ ಪರಿಶ್ರಮ ಸಾರ್ಥಕವಾಗುತ್ತದೆ. ಶಿವಕುಮಾರ್ ಅವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ನಿರ್ಮಾಣವಾಗಲಿ, ರಾಜ್ಯದ ಶ್ರೇಯೋಭಿವೃದ್ಧಿ, ಬಡವರು ಸೇರಿದಂತೆ ಎಲ್ಲಾ ವರ್ಗದ ಹಿತ ಕಾಯುವಂತಾಗಲಿ” ಎಂದು ಆಶೀರ್ವದಿಸಿದರು.

“ಕೆಲವು ರಾಜಕಾರಣಿಗಳು ಸಮಾಜದಲ್ಲಿ, ಜಾತಿ ಧರ್ಮಗಳ ಮಧ್ಯೆ ಸಂಘರ್ಷ ಹುಟ್ಟು ಹಾಕುತ್ತಿದ್ದಾರೆ. ಹೀಗಾಗಿ ಸಮುದಾಯಗಳ ನಡುವೆ ಸಾಮರಸ್ಯ ಮೂಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಮಯ ಬಂದಾಗ ಶಿವಕುಮಾರ್ ಅವರು ದಿಟ್ಟ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ. ಅವರು ನಂಬಿರುವ ದೈವ ಕೈ ಹಿಡಿದು ನಡೆಸಿ ಉನ್ನತ ಸ್ಥಾನಕ್ಕೆ ಮುನ್ನಡೆಸಲಿ” ಎಂದು ಹರಸಿದರು.

“ಒತ್ತಡದ ಕೆಲಸದ ನಡುವೆಯು ಜನರ ಮೇಲೆ ಅವರಿಗೆ ಅಭಿಮಾನ ಇಲ್ಲಿಗೆ ಬರುವಂತೆ ಮಾಡಿದೆ. ಶಿವಕುಮಾರ್ ಅವರು ಕೇವಲ ಕ್ಷೇತ್ರದ ಜನರ ಸಮಸ್ಯೆಗಳನ್ನು ‌ಬಗೆಹರಿಸುತ್ತಿಲ್ಲ, ರಾಜ್ಯದ ಎಲ್ಲಾ ಕ್ಷೇತ್ರದ ‌ಜನರ‌‌ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ನಾಯಕರ ‌ಮೇಲೆ ಎಲ್ಲರ ಅಭಿಮಾನ ಅನವರತವಿರಲಿ. ಎಲ್ಲರೂ ಅವರ ಜೊತೆ ಇದ್ದರೆ ನಾಯಕರ ಸ್ಥಿರ ಭಾವನೆ ‌ಈ ಕ್ಷೇತ್ರದ‌ ಮೇಲೆ ದೃಡವಾಗಿ ಇರುತ್ತದೆ. ಈ ಭಾಗದ ಜನ‌ಸಮುದಾಯಕ್ಕೆ ಸೂಚ್ಯವಾಗಿ ಕರೆಯನ್ನು ಕೊಡುತ್ತೇನೆ” ಎಂದು ಕರೆ ನೀಡಿದರು.

ಶಿವಕುಮಾರ್ ಅವರ ಭಕ್ತಿ, ಶ್ರದ್ಧೆ ವರ್ಣಿಸಲು ಅಸಾಧ್ಯ:
ಚಾರಿತ್ರಿಕ ಇತಿಹಾಸದಲ್ಲಿ ಇಂದು ಸುದಿನ. ಬಿಜ್ಜಹಳ್ಳಿಯಲ್ಲಿ ಇಂದು ಹಲವು ಧಾರ್ಮಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ರಂಭಾಪುರಿ ಪೀಠ ಪರಂಪರೆಯಲ್ಲಿ 119ನೇ ಪೀಠಾಧೀಶ್ವರರಾದ ವೀರ ಗಂಗಾಧರ ಶ್ರೀಗಳ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಟ್ಟಿರುವ ಭಕ್ತಿ, ಶ್ರದ್ಧೆ, ಅಭಿಮಾನವನ್ನು ವರ್ಣಿಸಲು ಶಬ್ಧಗಳಿಲ್ಲ.

ಗಂಗಾಧರ ಶ್ರೀಗಳ ಆಶೀರ್ವಾದದಿಂದ ತಮ್ಮ ಜೀವನದಲ್ಲಿ ಬಂದ ಕಷ್ಟಗಳು ಮಂಜಿನಂತೆ ಕರಗಿ ಮಾಯವಾಗಿವೆ ಎಂದು ಶಿವಕುಮಾರ್ ಅವರು ಬಹಳಷ್ಟು ಬಾರಿ ವ್ಯಕ್ತಪಡಿಸಿದ್ದಾರೆ. ಶಿವಕುಮಾರ್ ಅವರು ಈ ಕ್ಷೇತ್ರದ ಜನರ ಕಲ್ಯಾಣಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ.

ಶಿವಕುಮಾರ್ ಅವರು ದೇವರಲ್ಲಿ ಹಾಗೂ ಧರ್ಮದಲ್ಲಿ ಅಪಾರ ನಂಬಿಕೆ ಹೊಂದಿದ್ದಾರೆ. ಅವರ ಮಾತಿನಲ್ಲಿ ಆಧ್ಯಾತ್ಮದ ಒಳತಿರುಳನ್ನು ಅರಿಯಬಹುದು. ಇಂತಹ ಮಾತುಗಳು ರಾಜಕಾರಣಿಗಳ ಬಾಯಲ್ಲಿ ಬರುವುದು ಕಷ್ಟ. ಅವರ ತಂದೆ ತಾಯಿ ಕೊಟ್ಟಿರುವ ಸಂಸ್ಕಾರದ ಪರಿಣಾಮ ಹಾಗೂ ಗಂಗಾಧರ ಶ್ರೀಗಳ ಮೇಲೆ ಇಟ್ಟಿರುವ ಅಪಾರ ಭಕ್ತಿಯಿಂದ ಅವರ ಬಾಯಲ್ಲಿ ಇಂತಹ ಮಾತುಗಳು ಬರುವಂತೆ ಮಾಡಿದೆ.

ಗಂಗಾಧರ ಸ್ವಾಮೀಜಿಗಳು ನನ್ನ ಜೀವನವನ್ನೇ ಬದಲಿಸಿದರು : DK
ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿಗಳು ನನ್ನ ಜೀವನವನ್ನೇ ಬದಲಿಸಿದವರು, ನಮ್ಮ ರಾಜ್ಯದಲ್ಲಿ ರಂಭಾಪುರಿ ಶ್ರೀಗಳ ಧಾರ್ಮಿಕ ಇತಿಹಾಸ, ಪರಂಪರೆ ಬಹಳ ವಿಶೇಷವಾದುದು. ಧರ್ಮ ಉಳಿಸುವಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಮಾತನಾಡಿದ ಅವರು,”ಬಾಳೆ ಹೊನ್ನೂರು ಪೀಠದ ಗಂಗಾಧರ ಸ್ವಾಮೀಜಿಗಳು ನನ್ನ ಜೀವನವನ್ನೇ ಬದಲಿಸಿದವರು. ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ ಪದುಭನಾಭನ ಪಾದ ಭಜನೆ ಪರಮ ಸುಖವಯ್ಯ ಎಂಬ ಪುರಂದರ ದಾಸರ ಪದಗಳಂತೆ, ಇಂದು ಈ ಚಿಕ್ಕದಾದ, ಚೊಕ್ಕದಾದ ಧಾರ್ಮಿಕ ಕಾರ್ಯಕ್ರಮಕ್ಕೆ ರಂಭಾಪುರಿ ಶ್ರೀಗಳು ಆಗಮಿಸಿರುವುದು ನಮ್ಮ ಭಾಗ್ಯ” ಎಂದು ನಮಿಸಿದರು.

You Might Also Like

6,798 ಕೋಟಿ ವೆಚ್ಚದಲ್ಲಿ ಆಂಧ್ರ, ತೆಲಂಗಾಣ, ಬಿಹಾರ ಒಳಗೊಂಡ ರೈಲು ಯೋಜನೆಗಳಿಗೆ ಸಂಪುಟ ಅನುಮೋದನೆ

ವರುಣಾರ್ಭಟಕ್ಕೆ ಕೆಆರ್‌ಎಸ್‌ ಡ್ಯಾಂನಲ್ಲಿ ಒಳಹರಿವು ಮತ್ತಷ್ಟು ಹೆಚ್ಚಳ

ಉತ್ತರ ಪ್ರದೇಶದಲ್ಲಿ ಘೋರ ಅಪಘಾತ : ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ 8 ಯಾತ್ರಿಕರ ದುರ್ಮರಣ

ಉಡುಪಿ : ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಹೋಟೆಲ್ ನೌಕರನ ಬರ್ಬರ ಕೊಲೆ

ನಾಲ್ವರು ಮಹನೀಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ಮುರ್ಮು

Share This Article
Facebook Copy Link Print
Previous Article ICMR ICMR ICMR ಹಠಾತ್ ಸಾವಿಗೆ ಕಾರಣವೇನು..? ICMR ಅಧ್ಯಯನದಿಂದ ಬಯಲಾಯ್ತು ಕಾರಣ
Next Article Priyank Kharge ಗ್ರಾ.ಪಂ, ತಾ.ಪಂ ಹಾಗೂ ಜಿ. ಪಂ.ಗಳಿಗೆ ಪ್ರತ್ಯೇಕ ಲಾಂಛನ : ಸಚಿವ ಪ್ರಿಯಾಂಕ್ ಖರ್ಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up