ಬೆಂಗಳೂರು : ಕರ್ನಾಟಕದಾದ್ಯಂತ ಜುಲೈ 12ರಿಂದ ಭಾರೀ ಮಳೆಗೆ ಆಗೂಸ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬೀ ಸಮುದ್ರದಲ್ಲಿ ಸೈಕ್ಲೋನ್ ಸರ್ಕುಲೇಷನ್ ಮತ್ತು ಉತ್ತರ ಭಾರತದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ತೀವ್ರ ಮಳೆ ಸುರಿಯಲಿದೆ. ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 60.5 ರಿಂದ 110 ಮಿಲಿಮೀಟರ್ ವರೆಗೆ ಮಳೆ ಆಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಜುಲೈ 16ರವರೆಗೆ ಮಬ್ಬು ವಾತಾವರಣ ಮತ್ತು ತಂಪಾದ ಹವಾಮಾನ ನಿರೀಕ್ಷಿಸಲಾಗಿದೆ. ನಗರದ ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 20°C ಆಗಿರಬಹುದು. ಶುಕ್ರವಾರ (ಜುಲೈ 11) ರಾತ್ರಿ ವಿದ್ಯಾಪೀಠ, ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ, ಯಲಹಂಕ, ಕೋರಮಂಗಲ, ಹಂಪಿನಗರ ಮತ್ತು ಇತರ ಪ್ರದೇಶಗಳಲ್ಲಿ ಜೋರಾದ ಮಳೆ ಸುರಿದಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ಸೈಕ್ಲೋನಿಕ್ ಸರ್ಕುಲೇಷನ್ ಮತ್ತು ಬಂಗಾಳಕೊಲ್ಲಿ ಉಷ್ಣವಲಯದ ತೊಂದರೆಗಳು ಕರ್ನಾಟಕದ ಮಳೆಗೆ ಪ್ರಮುಖ ಕಾರಣ. ಮುಂದಿನ 48 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಬಹುದು. ಕರ್ನಾಟಕ ಸರ್ಕಾರವು ನದಿ ಮತ್ತು ಕಟ್ಟೆಗಳ ಭದ್ರತೆಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

