Heavy rain Alert : ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಪ್ರಮುಖವಾಗಿ 4 ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದ್ದು,ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮುಂದಿನ ಮೂರು ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಸಿಕ್ಕಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಬೆಂಗಳೂರು, ಮಂಡ್ಯ, ರಾಮನಗರ ಸೇರಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇನ್ನು ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆಯಾಗುತ್ತಿದೆ. ಮಂಗಳೂರು ಸೇರಿದಂತೆ ಸುತ್ತಮುತ್ತ ವ್ಯಾಪಕ ಮಳೆಯಾಗ್ತಿದ್ದು,ಬಂಟ್ವಾಳ ಹಾಗೂ ಮಂಗಳೂರು ತಾಲ್ಲೂಕುಗಳಲ್ಲಿ ಮಳೆಯ ಅಬ್ಬರ ಜೋರಾಗಿರುವುದರಿಂದ ಇವೆರಡು ತಾಲ್ಲೂಕುಗಳು ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

