ಬೆಂಗಳೂರು: ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮುಂದಿನ ಮೂರು ದಿನಗಳವರೆಗೆ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಅಥವಾ ನಾಯಕರೊಂದಿಗೆ ಯಾವುದೇ ಸಭೆ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಲಭ್ಯವಿರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
“ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾನು ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ” ಎಂದು ಡಿಕೆ ಶಿವಕುಮಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೈಸೂರಿನಲ್ಲಿ ಶನಿವಾರ ನಡೆದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಭಾಷಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸದೆ ಇರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಇದು ಇಬ್ಬರ ನಡುವೆ ಬಿರುಕು ಇದೆ ಎಂಬುದನ್ನು ಮತ್ತೊಮ್ಮೆ ಪುಷ್ಟೀಕರಿಸಿದೆ ಎನ್ನಲಾಗುತ್ತಿದೆ.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

