ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್’ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ.
GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜಿ ಎಸ್ ಟಿ ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3 ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

