ಚಿತ್ರದುರ್ಗ: ಆಕಸ್ಮಿಕ ವಿದ್ಯುತ್ ತಗುಲಿ ಮೂವರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಕಾಳಘಟ್ಟ ಗ್ರಾಮದಲ್ಲಿ ನಡೆದಿದೆ. ದಾವಣಗೆರೆ ಮೂಲದ ನಜೀರ್ (30), ಫಾರುಕ್ (32), ಹಾಗು ಶ್ರೀನಿಡ (30) ಮೃತ ದುರ್ಧೈವಿಗಳಾಗಿದ್ದು, ತೋಟದಲ್ಲಿ ಅಡಿಕೆ ಶೆಡ್ ನಿರ್ಮಾಣ ವೇಳೆ ವಿದ್ಯುತ್ ತಂತಿ ತಗುಲಿ ದುರಂತ ಸಂಭವಿಸಿದೆ.
ಗಂಭೀರ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಜಾಜೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

