By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ : ಖಂಡ್ರೆ ಸ್ಪಷ್ಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ : ಖಂಡ್ರೆ ಸ್ಪಷ್ಟನೆ

ರಾಜ್ಯ-KarnatakaLatest

ಹೊರರಾಜ್ಯದ ದನಕರುಗಳನ್ನು ಕಾಡಿನಲ್ಲಿ ಮೇಯಿಸುವುದಕ್ಕೆ ಮಾತ್ರ ನಿಷೇಧ : ಖಂಡ್ರೆ ಸ್ಪಷ್ಟನೆ

Only ban on grazing of cattle from outside the state in the forest: Khandre clarifies

Published July 24, 2025
Share
2 Min Read
eshwar khandre eshwar khandre eshwar khandre
SHARE

ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ. ಆದರೆ ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆ 1972ರ ಅಡಿಯಲ್ಲಿ ಮೀಸಲು ಅರಣ್ಯ, ವನ್ಯಜೀವಿಧಾಮ, ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಜನರ ಅತಿಕ್ರಮ ಪ್ರವೇಶಕ್ಕೆ ಮತ್ತು ಸಾಕುಪ್ರಾಣಿಗಳನ್ನು ಮೇಯಿಸಲು ಅವಕಾಶ ಇರುವುದಿಲ್ಲ.

ಆದರೆ ರಾಜ್ಯದ ಕೆಲವು ಅರಣ್ಯ ಭಾಗದಲ್ಲಿ ಹಲವು ವರ್ಷದಿಂದ ಇಂತಹ ರೂಢಿ ಇದ್ದು, ಕಾಡಿನಂಚಿನ ಜನರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಚ್ಚು ಹಾಲು ನೀಡುವ ಹಸುಗಳನ್ನು ಹೊಂದಲು ಅವಕಾಶ ಕಲ್ಪಿಸುವ ಮೂಲಕ ಮತ್ತು ತಮ್ಮ ಪಟ್ಟಾ ಜಮೀನಿನಲ್ಲಿ ಹಸಿ ಮೇವು ಬೆಳೆಸಲು ಪ್ರೋತ್ಸಾಹಿಸುವ ಮೂಲಕ ಹಂತ ಹಂತವಾಗಿ ಅರಣ್ಯದಲ್ಲಿ ಜಾನುವಾರುಗಳನ್ನು ಬಿಡದಂತೆ ನಿರ್ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸುತ್ತದೆ. ಇಷ್ಟೊಂದು ದನಕರುಗಳನ್ನು ಒಟ್ಟಿಗೆ ಕಾಡಿಗೆ ತೆಗೆದುಕೊಂಡು ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ, ನೀರಿನ ಕೊರತೆ ಎದುರಾಗುತ್ತಿದೆ.

ಕಾಲುಬಾಯಿ ರೋಗ, ಚರ್ಮಗಂಟು ಅಥವಾ ಬಾವು (ಲಿಂಪಿ ಸ್ಕಿನ್), ನೆರಡಿ (ಆಂಥರಾಕ್ಸ್) ಮೊದಲಾದ ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇರುತ್ತದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಜಾನುವಾರುಗಳನ್ನು ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ. ಆದರೆ ಸ್ಥಳೀಯರ ದನಕರುಗಳಿಗೆ ಮತ್ತು ಅರಣ್ಯಹಕ್ಕು ಕಾಯಿದೆಯಡಿ ಹಕ್ಕು ಪಡೆದವರಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಚಾಮರಾಜನಗರದಲ್ಲಿ ಈಗಾಗಲೇ ಅರಣ್ಯ ಇಲಾಖೆ, ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿಯನ್ನು ಬಳಸಿಕೊಂಡು 10-15 ರೈತರಿಗೆ ಹೆಚ್ಚು ಹಾಲು ನೀಡುವ ಹೈಬ್ರೀಡ್ ಹಸುಗಳನ್ನು ಕೊಡಿಸಿದ್ದಾರೆ. ಪ್ರಸ್ತುತ ಕಾಡಿನಲ್ಲಿ ದನ ಮೇಯಿಸುವ ಕಾಯಕವನ್ನೇ ಜೀವನೋಪಾಯ ಮಾಡಿಕೊಂಡಿರುವವರಿಗೆ ಇಂತಹ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಹಂತ ಹಂತವಾಗಿ ಕಾಡಿನಲ್ಲಿ ದನ, ಕರು, ಎಮ್ಮೆ, ಮೇಕೆ, ಕುರಿಗಳನ್ನು ಮೇಯಿಸದಂತೆ ಮನವೊಲಿಸಲಾಗುವುದು ಎಂದೂ ತಿಳಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನಲ್ಲಿ ಈ ಸಂಬಂಧ ಸುದೀರ್ಘ ವಾದ ಪ್ರತಿವಾದ ನಡೆದು, ಅಂತಿಮವಾಗಿ ತಮಿಳುನಾಡಿನ ಅರಣ್ಯಗಳಲ್ಲಿ ಜಾನುವಾರು ಮೇಯಿಸಲು ಅವಕಾಶ ಇರುವುದಿಲ್ಲ ಎಂಬ ತೀರ್ಪು ಬಂದಿದೆ. ಆ ತೀರ್ಪಿನ ಬಳಿಕ ರಾಜ್ಯಕ್ಕೆ ನೆರೆ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಜಾನುವಾರು ತಂದು ರಾಜ್ಯದ ಕಾಡಿನಲ್ಲಿ ಮೇಯಿಸಲಾಗುತ್ತಿದೆ. ತಿಂಗಳುಗಟ್ಟಲೆ ಹೀಗೆ ಕಾಡಿನಲ್ಲಿ ದನಕರು ಮೇಯಿಸುವುದರಿಂದ ಕಾಡಿನ ಹುಲ್ಲುಗಾವಲು ಬರಿದಾಗುತ್ತಿದೆ, ಸಸ್ಯಸಂವರ್ಧನೆಗೂ ಅಡ್ಡಿಯಾಗುತ್ತದೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದು ವನ್ಯಜೀವಿಗಳಿಗೆ ವಿಷ ಹಾಕುವ ಹಂತ ತಲುಪಿದ್ದ ಹಿನ್ನೆಲೆಯಲ್ಲಿ ಕಾನೂನು ರೀತ್ಯ ಮತ್ತು ನಿಯಮಾನುಸಾರ ಕ್ರಮ ವಹಿಸಲು ಸೂಚಿಸಲಾಗಿತ್ತು ಎಂದೂ ತಿಳಿಸಿದ್ದಾರೆ.

You Might Also Like

2ನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿ ಹೊಸ ಇತಿಹಾಸ ಬರೆದ ಭಾರತೀಯ ಶುಭಾಂಶು ಶುಕ್ಲಾ

130ನೇ ತಿದ್ದುಪಡಿ ಮಸೂದೆ ಕುರಿತು ಅಮಿತ್ ಶಾ ಸ್ಪಷ್ಟನೆ, 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

ರಾಜಧಾನಿಯಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಮತದಾನ ಆರಂಭ: ತುಷಾರ್ ಗಿರಿನಾಥ್

ದಸರಾ ಗಜಪಡೆಯ ಎರಡನೇ ತಂಡ ತೂಕ ಪರೀಕ್ಷೆ, ಭೀಮನಿಗಿಂತ ಸುಗ್ರೀವನೇ ಬಲುಭಾರ

TAGGED:Eshwar Khandre
Share This Article
Facebook Copy Link Print
Previous Article dk shivakumar copy dk shivakumar copy dk shivakumar copy ಮಹದಾಯಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಡಿಕೆಶಿ
Next Article Siddaramaiah And Rahul Gandhi Siddaramaiah And Rahul Gandhi Siddaramaiah And Rahul Gandhi ಕರ್ನಾಟಕದಲ್ಲೂ ಚುನಾವಣಾ ಅಕ್ರಮ : ರಾಹುಲ್ ಆರೋಪಕ್ಕೆ ದ್ವನಿಗೂಡಿಸಿದ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up