ಹಾಸನ: ಯೂರಿಯಾ ರಸಗೊಬ್ಬರ ಪೂರಿಕೆ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ ಎಂದಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ. ಈ ಬಾರಿ 5 ಲಕ್ಷ ಹೆಕ್ಟೇರ್ ಹೆಚ್ಚು ಬಿತ್ತನೆ ಆಗಿರುವುದರಿಂದ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.
ಮಳೆ ಪ್ರಮಾಣ ಹೆಚ್ಚಾಗಿದೆ, ಈ ಬಾರಿ ಮುಂಗಾರು ಮಳೆ ಬೇಗ ಶುರುವಾಗಿದೆ. ಜೋಳ ಬಿತ್ತನೆ ಜಾಸ್ತಿಯಾಗಿದೆ. ಹಾಗಾಗಿ ರೈತರು ಹೆಚ್ಚು ಗೊಬ್ಬರ ಉಪಯೋಗಿಸುತ್ತಿದ್ದು, ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.
ದುಬಾರಿ ಬೆಲೆಗೆ ಗೊಬ್ಬರ, ಬಿತ್ತನೆ ಬೀಜ ಮಾರಾಟ
900 ರೂಪಾಯಿ ಇರುವ ಹತ್ತಿ ಬೀಜದ ಪ್ಯಾಕೆಟ್ ಅನ್ನು 1,200 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. 258 ರೂ. ಇರುವ ಯೂರಿಯಾ 400 ರಿಂದ 500 ರೂ.ಗೆ ಮಾರಾಟ ಆಗುತ್ತಿದೆ. 1,200 ರೂ. ಬೆಲೆಯ ಡಿಎಪಿ ಗೊಬ್ಬರ 1,800 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು, ರೈತರು ದುಪ್ಪಟ್ಟು ಬೆಲೆ ತೆರಬೇಕಾಗಿದೆ.
ಗದಗದಲ್ಲೂ ರಸಗೊಬ್ಬರ ಸಿಗದೆ ರೈತರ ಪರದಾಡುತ್ತಿದ್ದಾರೆ. ಮಳೆಯನ್ನೂ ಲೆಕ್ಕಿಸದೇ ಸರದಿಯಲ್ಲಿ ನಿಂತಿದ್ದಾರೆ. ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಬೆಳೆಗೆ ರಸಗೊಬ್ಬರ ಹಾಕದಿದ್ದರೆ ಹಾನಿಯಾಗುವ ಸಾಧ್ಯತೆ ಇದ್ದು, ಗೊಬ್ಬರ ಪೂರೈಕೆ ಮಾಡದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.
- ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
- ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
- ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
- ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
- ತರಗತಿಯಲ್ಲೇ ಪ್ರಪೋಸ್ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು

