ಬೆಂಗಳೂರು : ದರ್ಶನ್ ಫ್ಯಾನ್ಸ್ ಮತ್ತು ಬಿಗ್ ಬಾಸ್ ಖ್ಯಾತಿಯ ಪ್ರಥಮ್ ನಡುವಿನ ಜಗಳ ವಿಚಾರವಾಗಿ ನಟ ಧ್ರುವ ಸರ್ಜಾ ಮಾತನಾಡಿದ್ದಾರೆ. ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ.
ಪ್ರಥಮ್ ವಿರುದ್ಧ ಕಿಡಿಕಾರಿದ ಧ್ರುವ ಸರ್ಜಾ, ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರ ನಿಲ್ತೀನಿ. ಐ ಸ್ಟ್ಯಾಂಡ್ ವಿತ್ ದರ್ಶನ್ ಸರ್ ಎಂದಿದ್ದಾರೆ.
ಚಿಟುಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡೋದು ಸರಿ ಇಲ್ಲ. ಅವರಿಗೆ ಯಾರಾದ್ರೂ ಚಾಕು ತೋರಿಸಿದ್ರೆ ದೂರು ಕೊಡಬೇಕು. ಅವರನ್ನ ಬಿಟ್ಟು ದರ್ಶನ್ ಸರ್ ಬಗ್ಗೆ ಮಾತಾಡೋದು ಸರಿಯಲ್ಲ. ಏನು ಪ್ರೂವ್ ಮಾಡೋಕೆ ಹೋಗ್ತಿದ್ದಾರೆ ಗೊತ್ತಾಗ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.
ದರ್ಶನ್ ಫ್ಯಾನ್ಸ್, ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣವನ್ನ ನಟ ಧ್ರುವ ಸರ್ಜಾ ಖಂಡಿಸಿದ್ದಾರೆ. ರಮ್ಯಾ ಮೇಡಂ ಬಗ್ಗೆ ವಲ್ಗರ್ ಆಗಿ ಟ್ರೋಲ್ ಖಂಡಿಸ್ತೀನಿ ಎಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

