ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ. ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.
ಮೇ 1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧಿಸಿದಂತೆ 12 ಜನರನ್ನು ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ ಎನ್ಐಎ ಹೆಗಲಿಗೆ ನೀಡಿತ್ತು.
ಸುಹಾಸ್ ಶೆಟ್ಟಿ ಹೆತ್ತವರು ಕೂಡ ಎನ್ಐಎ ತನಿಖೆ ಮೂಲಕ ಮಾತ್ರ ತಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತೇ ಎಂದು ಒತ್ತಾಯಿಸಿದ್ದರು. ಈ ಮಧ್ಯೆ ಅವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್ಐಎಗೆ ನೀಡುವಂತೆ ಮನವಿ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಿತ್ತು.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

