ಮಂಗಳೂರು : ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ಮುಂಗಾರು ಮಳೆ ಮತ್ತೆ ಇಂದಿನಿಂದ ಅಬ್ಬರಿಸಲಿದೆ. ಈಗಾಗಲೇ ಕರ್ನಾಟಕದ ಕರಾವಳಿಯಲ್ಲಿ ಭಾರೀ ಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು,ಅಗಸ್ಟ್ 6 ಮತ್ತು 7 ರಂದು ಅರೆಂಜ್ ಅಲರ್ಟ್ ಘೋಷಿಸಿದೆ.
ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ, ಇಂದು ಮತ್ತೆ ಪ್ರಾರಂಭವಾಗಿದೆ. ಮಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆ ಬಳಿಕ ಉತ್ತಮ ಮಳೆಯಾಗುತ್ತಿದೆ.ಕರಾವಳಿಯಲ್ಲಿ ಬಿರುಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಹಿನ್ನಲೆ ಮೀನುಗಾರರಿಗೆ ಅಗಸ್ಟ್ 5 ಮತ್ತು 6 ರಂದು ಸಮುದ್ರಕ್ಕೆ ಇಳಿಯದಂತೆ ವಾರ್ನಿಂಗ್ ನೀಡಿದೆ.
ರಾಜ್ಯಾದಾದ್ಯಂತ ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಆಗಸ್ಟ್ 6 ಮತ್ತು 7 ರಂದು ಅಲ್ಲಲ್ಲಿ ಭಾರಿ ಇಂದ ಅತಿ ಭಾರಿ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾದಾರಣ ಮಳೆ ಆಗಸ್ಟ್ 8 ರವರೆಗೆ ಆಗುವ ಸಾಧ್ಯತೆಗಳಿವೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಆರೇಂಜ್ ಮತ್ತು ಯೆಲ್ಲೋ ಆಲರ್ಟ್ ನೀಡಲಾಗಿದ್ದು, ಬಯಲು ಸೀಮೆಯ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

