ಬೆಂಗಳೂರು : ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದು , 6 ಜನರಿಗೆ ಗಾಯಗಳಾಗಿರುವಂತಹ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮುಬಾರಕ್(8) ಮೃತ ಬಾಲಕ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಸಿಲಿಂಡರ್ ಸ್ಪೋಟಕ್ಕೆ 10 ಮನೆಗಳು ಛಿದ್ರ ಛಿದ್ರವಾಗಿದೆ ಎನ್ನಲಾಗಿದೆ .ಸಿಲಿಂಡರ್ ಸ್ಪೋಟಕ್ಕೆ ಓರ್ವ ಮಹಿಳೆಯ ಕಾಲು ಕೂಡ ಕಟ್ ಆಗಿದೆ.
ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮುಬಾರಕ್ (8) ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಸ್ತೂರಿ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಒಂದು ಸಿಲಿಂಡರ್ ಸ್ಪೋಟಗೊಂಡು 6 ಮನೆ ಛಿಧ್ರ ಛಿದ್ರವಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ದಕ್ಷಿಣ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಸ್ತೂರಮ್ಮ(35), ಸರಸಮ್ಮ(50), ಶಬೀರನಾ ಬಾನು(35), ಸುಬ್ರಮಣಿ(62), ಶೇಖ್ ನಜೀದ್ ಉಲ್ಲಾ(37), 8 ವರ್ಷದ ಬಾಲಕಿ ಫಾತಿಮಾ ಸೇರಿ 12 ಜನರಿಗೆ ಗಾಯಗಳಾಗಿದ್ದು, ಸಂಜಯ್ಗಾಂಧಿ ಮತ್ತು ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗಾಯಾಳು ಕಸ್ತೂರಿಯ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಮೇಲ್ನೋಟಕ್ಕೆ ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎನ್ನತ್ತಿದ್ದಾರೆ.

