ಬೆಳಗಾವಿ : ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಮುಂಬೈಗೆ ಹೊರಟ್ಟಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಷವಾಗಿದೆ. ಪೈಲಟ್ನ ಸಮಯ ಪ್ರಜ್ಞೆಯಿಂದ 48 ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಸ್ಟಾರ್ ಏರ್ ಕಂಪನಿಯ ವಿಮಾನ ಶನಿವಾರ (ಆ.16) ಬೆಳಗ್ಗೆ ಬೆಳಗಾವಿಯಿಂದ ಮುಂಬೈಗೆ ಹೊರಟಿತ್ತು. ಬೆಳಗಾವಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಮೇಲೆ ವಿಮಾನದ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಂಡಿದೆ.
ಕೂಡಲೇ ಅಲರ್ಟ್ ಆದ ಪೈಲೆಟ್ 15 ನಿಮಿಷಗಳಲ್ಲೇ ಮತ್ತೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ಪೈಲಟ್ನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ಸ್ಟಾರ್ ಏರ್ ಕಂಪನಿ ಪ್ರಯಾಣಿಕರಿಗೆ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಿ, ಮುಂಬೈಗೆ ಕಳುಹಿಸಿಕೊಟ್ಟಿದ್ದಾರೆ.

