ಕೊಲ್ಕೊತ್ತಾ: ದಿ ಕಾಶ್ಮೀರಿ ಫೈಲ್ಸ್ ಚಿತ್ರ ನಿರ್ದೇಶನ ಖ್ಯಾತಿಯ ವಿವೇಕ್ ಅಗ್ನಿಹೋತ್ರಿಯವರ ಮುಂಬರುವ ದಿ ಬೆಂಗಾಲ್ ಫೈಲ್ಸ್ ಚಿತ್ರದ ಟ್ರೇಲರ್ ಬಿಡಗಡೆ ಕಾರ್ಯಕ್ರಮವನ್ನು ಕೊಲ್ಕೊತ್ತಾ ಪೊಲೀಸರು ತಡೆದಿರುವ ಘಟನೆ ಶನಿವಾರ ವರದಿಯಾಗಿದ್ದು, ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
1946ರ ಕೊಲ್ಕೊತ್ತಾ ದಂಗೆಗಳನ್ನು ಆಧರಿಸಿದೆ ಎಂದು ಹೇಳಲಾದ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವನ್ನು ಮೊದಲು ಕೊಲ್ಕೊತ್ತಾದ ಮಲ್ಟಿಫ್ಲೆಕ್ಸ್ನಲ್ಲಿ ಅನಾವರಣಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಕೆಲವು ಒತ್ತಡಗಳ ಕಾರಣ ಬಳಿಕ ನಗರದ ಪಂಚತಾರ ಹೋಟೆಲ್ನಲ್ಲಿ ಆಯೋಜಿಸಲಾಗಿತ್ತು ಎನ್ನಲಾಗಿದೆ. ಬೆಳಿಗ್ಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಕಾರ್ಯಕ್ರಮ ಪ್ರಾರಂಭವಾದ ತಕ್ಷಣ ಸ್ಥಳಕ್ಕೆ ಪೊಲೀಸರು ಆಗಮಿಸಿ ತಡೆ ನೀಡಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.
ಸ್ಥಳದಲ್ಲಿ ಪೊಲೀಸರು ಮತ್ತು ಚಿತ್ರತಂಡದವರ ನಡುವೆ ವಾಗ್ವಾದ ನಡೆದಿದ್ದು, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವೇದಿಕೆ ಮೇಲೆ ಹತ್ತಿ ಟ್ರೇಲರ್ ಬಿಡುಗಡೆಗೆ ಬಳಸಬೇಕಾಗಿದ್ದ ಲ್ಯಾಪ್ಟಾಪ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಿಂತಿದೆ ಎನ್ನಲಾಗಿದೆ.
ದಿ ಬೆಂಗಾಲ್ ಫೈಲ್ಸ್ ಚಿತ್ರದ ವಿಚಾರವಾಗಿ ವಿವೇಕ್ ಅಗ್ನಿಹೋತ್ರಿ, ನಿರ್ಮಾಪಕಿ ಪತ್ನಿ ಪಲ್ಲವಿ ಜೋಶಿ, ಅಭಿಷೇಕ್ ಅಗರ್ವಾಲ್ ವಿರುದ್ಧ ಲೇಕ್ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ರದ್ದು ಕೋರಿ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಸೋಮವಾರ ನ್ಯಾಯಾಲಯವು ವಿಚಾರಣೆ ನಡೆಸಿ ಆಗಸ್ಟ್ 26 ರವರೆಗೆ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಆ. 19ಕ್ಕೆ ನಡೆಯಲಿದೆ.
- ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
- ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
- ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
- ಆನ್‌ಲೈನ್ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
- ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

