ಭುವನೇಶ್ವರ: ಒಡಿಶಾದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಇಂದು (ಆ.17) ಸಂಜೆ 5:15 ಕ್ಕೆ ಭುವನೇಶ್ವರದ ಎಸ್‌ಯುಎಂ ಅಲ್ಟಿಮೇಟ್ ಮೆಡಿಕೇರ್‌ಗೆ ದಾಖಲಿಸಲಾಗಿದೆ. ಸದ್ಯ ಪಟ್ನಾಯಕ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ದೃಢಪಡಿಸಿದೆ. ವೈದ್ಯರು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿಸಿದೆ.
ಈ ಸಂಬಂಧ ಬಿಜೆಡಿಯ ಹಿರಿಯ ನಾಯಕರೊಬ್ಬರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ತೀವ್ರ ಅಸ್ವಸ್ಥತೆಯಿಂದ ಬಳಲಿದ್ದ 78 ವರ್ಷದ ನವೀನ್ ಪಟ್ನಾಯಕ್ ಅವರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಕರೆದೊಯ್ಯುವ ಮೊದಲು ವೈದ್ಯರ ತಂಡವು ಅವರ ನಿವಾಸ ನವೀನ್ ನಿವಾಸ್‌ಗೆ ಭೇಟಿ ನೀಡಿತ್ತು. ಆಸ್ಪತ್ರೆಯು ಶೀಘ್ರದಲ್ಲೇ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
- ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
- ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
- ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
- ಆನ್‌ಲೈನ್ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
- ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ

