ನವದೆಹಲಿ : ಎನ್‌ಡಿಎ ಸಂಸದರ ಸಭೆಯಲ್ಲಿ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು.ಉಪರಾಷ್ಟ್ರಪತಿ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ನಡೆಯಲಿದೆ.
ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ನಿರ್ಧಾರವನ್ನು ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದ್ದು, ಪಕ್ಷದ ಅದ್ಯಕ್ಷ ಜೆಪಿ ನಡ್ಡಾ ಅವರು ಹೆಸರನ್ನು ಪ್ರಕಟಿಸಿದ್ದಾರೆ.
ತಮಿಳುನಾಡಿನ ತಿರುಪ್ಪೂರಿನಲ್ಲಿ 1957 ರ ಅಕ್ಟೋಬರ್ 20 ರಂದು ಜನಿಸಿದ ರಾಧಾಕೃಷ್ಣನ್ ಅವರ ರಾಜಕೀಯ ಜೀವನವು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಮತ್ತು ಜನಸಂಘದೊಂದಿಗೆ ಆರಂಭವಾಯಿತು. ಸಿಪಿ ರಾಧಾಕೃಷ್ಣನ್ 70ರ ದಶಕದಲ್ಲಿ ಆರ್ಎಸ್ಎಸ್ನಲ್ಲಿ ಸಕ್ರಿಯರಾಗಿದ್ದರು.
ಇಂಡಿ ಬಣ ಅಭ್ಯರ್ಥಿ ಅಂತಿಮಗೊಳಿಸಲು ಚರ್ಚೆ :
ವಿರೋಧ ಪಕ್ಷಗಳನ್ನು ಒಳಗೊಂಡ ಇಂಡಿ ಬಣವು ಎನ್‌ಡಿಎ ಆಯ್ಕೆ ಮಾಡಿದವರ ವಿರುದ್ಧ ಸ್ಪರ್ಧಿಸಲು ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಲು ಚರ್ಚೆಗಳನ್ನು ನಡೆಸುತ್ತಿದೆ.
ವಿರೋಧ ಪಕ್ಷಗಳು ಮಧ್ಯಾಹ್ನದ ಬಳಿಕ ತನ್ನ ಅಭ್ಯರ್ಥಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಎನ್‌ಡಿಎ ಘೋಷಣೆಗೆ ಪ್ರತಿಕ್ರಿಯೆಯಾಗಿ ವಿರೋಧ ಪಕ್ಷವು ತನ್ನ ನಡೆಯನ್ನು ಕಾರ್ಯತಂತ್ರ ರೂಪಿಸುತ್ತಿದೆ.

