ಮುಂಬೈ: ಭಾರತದ ವಸ್ತುಗಳ ಮೇಲೆ ಅಮೆರಿಕ ವಿಧಿಸಿದ ಶೇ. 50 ಸುಂಕ, ವಿದೇಶಿ ಹೂಡಿಕೆಯ ಹೊರಹರಿವು ಮುಂತಾದ ಕಾರಣಗಳಿಂದಾಗಿ ಸತತ 2ನೇ ದಿನವಾದ ಗುರುವಾರವೂ ಭಾರತೀಯ ಷೇರು ಮಾರುಕಟ್ಟೆ ಕುಸಿದಿದೆ.
ದಿನದ ವಹಿವಾಟಿನ ಮಧ್ಯೆ 773.52 ಅಂಕ ಕುಸಿದು 80,013.02ಕ್ಕೆ ತಲುಪಿದ್ದ ಸೆನ್ಸೆಕ್ಸ್, ಕೊನೆಯಲ್ಲಿ 705.97 ಅಂಕ ಇಳಿಕೆ ದಾಖಲಿಸಿ 80,080.57ರಲ್ಲಿ ಸ್ಥಿರಗೊಂಡಿತು. ನಿಫ್ಟಿ 211.15 ಅಂಕ ಕುಸಿದು 24,500.90ಕ್ಕೆ ಇಳಿಯಿತು.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಂಗಳವಾರ 6,516.49 ಕೋಟಿ ರೂ. ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಜಾಗತಿಕ ತೈಲ ಮಾನದಂಡ ಬ್ರೆಂಟ್ ಕಚ್ಚಾ ತೈಲ ಶೇ. 0.62 ಕಡಿಮೆಯಾಗಿ ಬ್ಯಾರೆಲ್ಗೆ 67.63ಕ್ಕೆ ಇಳಿಯಿತು. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬುಧವಾರ ಷೇರು ಮಾರುಕಟ್ಟೆ ತೆರೆದಿರಲಿಲ್ಲ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

