ಹುಬ್ಬಳ್ಳಿ : ಹುಬ್ಬಳ್ಳಿ ಈದ್ಗಾ ಮೈದಾನ ವಿವಾದ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಗೋಲಿಬಾರ್ನಲ್ಲಿ ಅನೇಕರ ಜೀವ ಹೋಗಿತ್ತು. ಇದೀಗ ಮತ್ತೆ ಇದೇ ಮೈದಾನದ ವಿಚಾರದಲ್ಲಿ ಮತ್ತೊಂದು ವಿವಾದ ಆರಂಭವಾಗಿದೆ.
ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಮೈದಾನ ಎಂದು ಮರು ನಾಮಕರಣ ಮಾಡಲು ಬಿಜೆಪಿ ನೇತೃತ್ವದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ. ಆದರೆ, ಇದಕ್ಕೆ ಮುಸ್ಲಿಂ ಸಮುದಾಯದವರು ಸೇರಿದಂತೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೆಸರು ಬದಲಾವಣೆ ವಿವಾದ ಹುಬ್ಬಳ್ಳಿಯಲ್ಲಿ ಮತ್ತೊಂದು ಸುತ್ತಿನ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.
ಈದ್ಗಾ ಮೈದಾನದ ಹೆಸರನ್ನು ಬದಲಾವಣೆ ಮಾಡಿ ರಾಣಿ ಚೆನ್ನಮ್ಮ ಮೈದಾನ ಅಂತ ನಾಮಕರಣ ಮಾಡಲು ಬಿಜೆಪಿ ನೇತೃತ್ವದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ. 2022 ರಲ್ಲಿ ನಡೆದಿದ್ದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಠರಾವು ಕೂಡಾ ಪಾಸ್ ಮಾಡಲಾಗಿದೆ. ಇದನ್ನು ಸರ್ಕಾರಕ್ಕೆ ಕಳುಹಿಸಿ, ಹೆಸರು ಬದಲಾವಣೆ ಖಂಡಿತಾ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

