ಕೊಲ್ಲೂರು : ದೇಶದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಇಂದು ಹರಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆ ಭಕ್ತರಾಗಿರುವ ಇಳಿಯರಾಜ ಅವರು ಕೊಲ್ಲೂರು ದೇವಸ್ಥಾನಕ್ಕೆ ಆಗಾಗ ಬರುತ್ತಾ ಇರುತ್ತಾರೆ. ಇದೀಗ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ದೇವಿಗೆ ವಜ್ರ ಕಿರೀಟ ಸಹಿತ ಆಭರಣಗಳು ಹಾಗೂ ವೀರಭದ್ರ ಸ್ವಾಮಿಗೆ ರಜತ ಕಿರೀಟ ಸಹಿತ ಖಡ್ಗ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು ಹಾಜರಿದ್ದರು.
ವಜ್ರ ಖಚಿತ ಕಿರೀಟವನ್ನು ಓಲಗ ಮಂಟಪದಿಂದ ಪುರ ಮೆರವಣಿಗೆಯಲ್ಲಿ ಶ್ರೀದೇವಿ ಸನ್ನಿಧಿಗೆ ಬರಮಾಡಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು ಭಾಗವಹಿಸಿದ್ದರು.

