ಹಾಸನ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿಡೆದಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಎಂಟು ಜನ ಸಾವನ್ನಪ್ಪಿದ್ದಾರೆ.
ಹೊಳೆನರಸೀಪುರ ಕಡೆ ಹೊರಟಿದ್ದ ಕ್ಯಾಂಟರ್ ಡಿಕ್ಕಿಯಾಗಿ ಈ ಗಂಭೀರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಚಾಲಕ ಮೆರವಣಿಗೆಯ ಮೇಲೆ ವಾಹನ ಹತ್ತಿಸಿದ್ದಾನೆ.
ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ಕ್ಯಾಂಟರ್ ನುಗ್ಗಿದೆ.
ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ಕ್ಯಾಂಟರ್ ನುಗ್ಗಿದೆ. ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಸಾವನ್ನಪ್ಪಿದ್ದಾರೆ. 10 ಮಂದಿ ಸ್ಥಿತಿ ಗಂಭೀರವಾಗಿದೆ.
ಇನ್ನೂ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ.ರೇವಣ್ಣ, ಸೂರಜ್ ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಹಾಸನ ದುರಂತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 8 ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಹೇಳಿದ್ದಾರೆ.

