ನವದೆಹಲಿ ಸೆಪ್ಟೆಂಬರ್ 20: ಮಲೆಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ. ಸೆಪ್ಟೆಂಬರ್ 23, 2025 ರಂದು ನಡೆಯುವ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಭಾರತ ಸರ್ಕಾರವು ಶ್ರೀ ಮೋಹನ್ ಲಾಲ್ ಅವರಿಗೆ 2023 ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ X ನಲ್ಲಿ ಪೋಸ್ಟ್ ಮಾಡಿದೆ.
300 ಕ್ಕೂ ಹೆಚ್ಛು ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿ ಸೈ ಅನಿಸಿಕೊಂಡಿದ್ದಾರೆ ಮೋಹನ್ ಲಾಲ್.ಚಿತ್ರರಂಗದಲ್ಲಿ ನಾಯಕ, ನಿರ್ದೇಶಕ, ನಿರ್ಮಾಪಕರಾಗಿ ಅನೇಕ ಚಿತ್ರಗಳನ್ನೂ ನಿರ್ಮಿಸಿ ಒಂದು ವಿಬ್ಬಿನ್ನ ರೀತಿಯಲ್ಲಿ ಹೆಸರನ್ನು ಮಾಡಿದ್ದರೆ ಮೋಹನ್ ಲಾಲ್. ಕನ್ನಡ, ಹಿಂದಿ, ತಮಿಳು, ಮಲಯಾಳಂ, ಹೀಗೆ ಹಲವಾರು ಭಾಷೆಗಳಲ್ಲಿ ಅಭಿನಹಿಸಿ ಚಿತ್ರರಂಗದಲ್ಲಿ ಗುರುತಿಸಿ ಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ :
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾದ ಮೋಹನ್ ಲಾಲ್ ಅವರಿಗೆ ಪ್ರದಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

